
ಭಟ್ಕಳ: ತಾಲ್ಲೂಕಿನ ಕೋವಿಡ್ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಇಳಿಮುಖ ಕಾಣುತ್ತಿದೆ. ಇತ್ತ ಪಟ್ಟಣ ವ್ಯಾಪ್ತಿಯಲ್ಲಿ ಮನೆ ಮನೆ ತೆರಳಿ ಕರೋನಾ ಪರೀಕ್ಷೆ ನಡೆಸಲಾಗುತ್ತಿದೆ. ಶುಕ್ರವಾರ ಪುರಸಭೆ ವ್ಯಾಪ್ತಿಯ ಮಣ್ಕುಳಿ ವಾರ್ಡಿನಲ್ಲಿ ಆರೋಗ್ಯ ಕಾರ್ಯಕರ್ತರು ಮನೆಮನೆ ತೆರಳಿ ಕೋವಿಡ್ ಪರೀಕ್ಷೆ ನಡೆಸಿದರು. ಈ ಬಗ್ಗೆ ಪ್ರತಿಕ್ರೀಯೆ ನೀಡಿದ ಪುರಸಭೆ ಮುಖ್ಯಾಧಿಕಾರಿ ದೇವರಾಜು ಪಟ್ಟಣ ವ್ಯಾಪ್ತಿಯಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕಡಿಮೆಯಿದೆ. ಅದರೂ ಕಂಟೈನಮೆAಟ್ ವಲಯಗಳಲ್ಲಿ ಮನೆ ಮನೆ ತೆರಳಿ ಪರೀಕ್ಷೆ ನಡೆಸಲಾಗುತ್ತಿದೆ.ಕಳೇದ ವಾರ ಚೌಥನಿ ವಾರ್ಡಿನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಹೆಚ್ಚು ಕೇಸಗಳು ದಾಖಲಾಗುವ ವಾರ್ಡಿನಲ್ಲಿ ಕಡ್ಡಾಯವಾಗಿ ಮನೆಗೆ ತೆರಳಿ ಪರೀಕ್ಷೆ ನಡೆಸಿ ಸೋಂಕಿತರನ್ನು ಪತ್ತೆ ಹಚ್ಚಲಾಗುವುದು ಎಂದರು. ಪುರಸಭೆಯ ಸಿಬ್ಬಂದಿಗಳಾದ ಕಿರಣ, ಉದಯ,ಅರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆ, ಪೊಲೀಸ ಸಿಬ್ಬಂದಿ ಇದ್ದರು.



More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ