ಮಳವಳ್ಳಿ : ಕೋವಿಡ್ನಿಂದಾಗಿ ಆರ್ಥಿಕ, ಸಾಮಾಜಿಕವಾಗಿ ಉಂಟಾದ ನಷ್ಟಕ್ಕಿಂತ ಶೈಕ್ಷಣಿಕವಾಗಿ ಉಂಟಾದ ನಷ್ಟ ಅಪಾರ ವಾಗಿದ್ದು ಇದನ್ನು ಸರಿದೂಗಿಸಲಾಗದು ಎಂದು ಶಾಸಕ ಡಾ. ಕೆ ಅನ್ನದಾನಿ ಹೇಳಿದ್ದಾರೆ.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಆಯೋಸಿಸಲಾಗಿದ್ದ ಸಮಾರಂಭದಲ್ಲಿ ಪ್ರಥಮ ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ನೀಡಲಾಗಿರುವ ಟ್ಯಾಬ್ ವಿತರಣೆ ಜೊತೆಗೆ ಐಸಿಟಿ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೋವಿಡ್ ಸಂದರ್ಭದಲ್ಲಿ ಬೇರೆಲ್ಲಾ ಕ್ಷೇತ್ರ ಗಳಿಗೆ ಆದ ನಷ್ಟಕ್ಕಿಂತ ವಿದ್ಯಾರ್ಥಿಗಳಿಗೆ ಆದ ನಷ್ಟವನ್ನು ಸರಿದೂಗಿಸುವುದು ಕಷ್ಟಕರ ಎಂದ ಅವರು ಇದೀಗ ಕಾಲೇಜು ತರಗತಿಗಳನ್ನು ಅರಂಭಿಸಲು ಮುಂದಾಗಿರುವ ಸರ್ಕಾರದ ನಡೆಗೆ ಬೆಂಬಲ ಸೂಚಿಸಿದ ಶಾಸಕರು ೩ನೇ ಅಲೆ ಹಿನ್ನೆಲೆಯಲ್ಲಿ ೧ರಿಂದ ೧೦ ನೇ ತರಗತಿಗಳ ಆರಂಭ ಸದ್ಯಕ್ಕೆ ಬೇಡ ಎಂದು ಸಲಹೆ ನೀಡಿದರು.
ಈ ಹಿಂದೆ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವುದನ್ನು ಕೈ ಬಿಟ್ಟು ಟ್ಯಾಬ್ ನೀಡುತ್ತಿರುವ ಸರ್ಕಾರದ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಅನ್ನದಾನಿ ಅವರು ಕಾಮಗಾರಿ ಹೆಸರಿನಲ್ಲಿ ಸರ್ಕಾರದ ಖಜಾನೆ ಯನ್ನು ಕೊಳ್ಳೆ ಹೊಡೆಯುತ್ತಿರು ವಾಗ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ನೀಡಲು ಜಿಪುಣತನ ವೇಕೆ ಎಂದು ಪ್ರಶ್ನಿಸಿದರು.
ಕೋವಿಡ್ ನಿಂದಾಗಿ ಸಾಂಪ್ರದಾಯಿಕ ಶಿಕ್ಷಣದ ಬದಲಾಗಿ ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು ಇದೇ ಹಿನ್ನೆಲೆಯಲ್ಲಿ ಸರ್ಕಾರ ನೀಡುತ್ತಿರುವ ಟ್ಯಾಬ್ ನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷೆ ರಾಧ ನಾಗರಾಜು,, ಉಪಾಧ್ಯಕ್ಷ ಟಿ ನಂದಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಜಿ ಪಂ ಸದಸ್ಯರಾದ ಹನುಮಂತು, ಮುಖ್ಯಾಧಿಕಾರಿ ಚಂದ್ರಶೇಖರ್ ಸೇರಿದಂತೆ ಹಲವಾರು ಪುರಸಭಾ ಸದಸ್ಯರು ಮುಖಂಡರು ಉಪಸ್ಥಿತರಿದ್ದರು.
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ