March 12, 2025

Bhavana Tv

Its Your Channel

ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನಾಚರಣೆ ಪ್ರಯುಕ್ತ ಪುಷ್ಪ ನಮನ ಹಾಗೂ ಗಿಡ ನೆಡುವ ಕಾರ್ಯಕ್ರಮ

ಭಟ್ಕಳ: ದೇಶದ ಅಖಂಡತೆಗೆ, ಸಾರ್ವಭೌಮತ್ವದ ಉಳಿವಿಗಾಗಿ ಬಲಿದಾನಗೈದ ಧೀಮಂತ ನಾಯಕ ಭಾರತೀಯ ಜನಸಂಘದ ಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನಾಚರಣೆ ಪ್ರಯುಕ್ತ ಬಿ.ಜೆ.ಪಿ. ಮಂಡಳದ ಕಚೇರಿಯಲ್ಲಿ ಪುಷ್ಪ ನಮನ ಕಾರ್ಯಕ್ರಮ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ ಸುನಿಲ್ ನಾಯ್ಕ, ಮಂಡಲ ಅಧ್ಯಕ್ಷ ಸುಬ್ರಾಯ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಮೋಹನ ನಾಯ್ಕ, ಭಾಸ್ಕರ ದೈಮನೆ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಿ ಶಾಂತರಾಮ, ಜಿಲ್ಲಾ ಹಿಂದುಳಿದ ಮೋರ್ಚಾದ ಅಧ್ಯಕ್ಷ ರವಿ ನಾಯ್ಕ ಜಾಲಿ, ಜಿಲ್ಲಾ ಮೋರ್ಚಾ ಹಾಗೂ ಪ್ರಕೋಷ್ಠಾದ ಸಂಚಾಲಕರು ಹಾಗೂ ಪದಾಧಿಕಾರಿಗಳು, ಮಂಡಲದ ಮೋರ್ಚಾ ಹಾಗೂ ಪ್ರಕೋಷ್ಠಾದ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರದ ಪ್ರಮುಖರು, ಮಹಿಳಾ ಮೋರ್ಚಾದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

error: