
ಭಟ್ಕಳ : ತಾಲೂಕಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಿಸ್ತೀರ್ಣಾಧಿಕಾರಿಗಳ ನೂತನ ಕಚೇರಿಯನ್ನು ಭಟ್ಕಳ ಮಿನಿವಿಧಾನ ಸೌಧದಲ್ಲಿ ಶಾಸಕ ಸುನಿಲ್ ನಾಯ್ಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಜನರ ಅಲೆದಾಟವನ್ನು ತಪ್ಪಿಸಲು ಒಂದೇ ಸೂರಿನಡಿಯಲ್ಲಿ ಎಲ್ಲ ಸೇವೆಗಳನ್ನು ಒದಗಿಸುವ ಪ್ರಯತ್ನ ಮಾಡಲಾಗಿದೆ. ಇದರ ಸದುಪಯೋಗ ಜನರಿಗೆ ಸಿಗುವಂತಾಗಬೇಕು ಎಂದು ತಿಳಿಸಿದರು.
ನಂತರ ಅಲ್ಪಸಂಖ್ಯಾತರ ಅಭಿವೃದ್ಧಿ ಅಧಿಕಾರಿ ಸಂಶುದ್ದೀನ್,ಮಾತನಾಡಿ ಕಳೆದೊಂದು ವರ್ಷದಲ್ಲಿ ಈ ೧.೩೩ ಕೋಟಿ ವಿದ್ಯಾರ್ಥಿ ವೇತನ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಜಮ ಮಾಡಲಾಗಿದೆ.ತಾಲೂಕಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರ್ಕಾರದ ಯೋಜನೆಯನ್ನು ಅನುಷ್ಠಾನಗೊಳಿಸ ಲಾಗುತ್ತಿದೆ. ಮಿನಿವಿಧಾನ ಸೌಧದಲ್ಲಿ ಕಚೇರಿಗೆ ಅವಕಾಶ ಮಾಡಿಕೊಟ್ಟಿರುವುದು ಉತ್ತಮವಾಗಿ ಕಾರ್ಯನಿರ್ವಹಿಸಲು ಅನುಕೂಲ ವಾಗಿದೆ ಎಂದರು. ಸ೦ದರ್ಭದಲ್ಲಿ ಸಹಾಯಕ ಆಯುಕ್ತ ಮಮತಾ ದೇವಿ,ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಯಲ್ಲಮ್ಮ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ ಮುಂತಾದವರಿದ್ದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ