
ಭಟ್ಕಳ ; ತಾಲ್ಲೂಕಿನ ಮಾರುಕೇರಿಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ಅನಾರೋಗ್ಯದಿಂದ ಮಂಗಳೂರಿನಲ್ಲಿ ಮೃತಪಟ್ಟರೆ ಆಕೆಯ ತಂದೆ ಮನೆಯಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಾರುಕೇರಿ ಹೆಜ್ಜಿಲು ನಿವಾಸಿ ಕಾವ್ಯ ರಾಮ ಗೊಂಡ(೧೫) ಹಾಗೂ ಆಕೆಯ ತಂದೆ ರಾಮ ಸುಕ್ರ ಗೊಂಡ (೪೬)ಮೃತರು. ತಾಲ್ಲೂಕಿನ ಕಿತ್ತೂರ ರಾಣಿ ಚೆನ್ನಮ್ಮಾ ವಸತಿ ಶಾಲೆಯ ವಿದ್ಯಾರ್ಥಿನಿಯಾದ ಕಾವ್ಯ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಳು. ಈಕೆ ಇದಕ್ಕಿಂದ್ದAತೆ ಕಳೇದ ಎರಡು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದು ಸೋಮವಾರ ಬೆಳಿಗ್ಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೇಲೆಯಿಂದ ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಇತ್ತ ಅನಾರೋಗ್ಯದಿಂದ ಬಳಲುತ್ತಿದ್ದ ತಂದೆ ಕೂಡ ಮನೆಯಲ್ಲಿಯೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಒಂದೆ ಕುಟುಂಬದ ಎರಡು ಸದಸ್ಯರು ಒಂದೇ ದಿನ ಮೃತರಾಗಿದ್ದು ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು.
ಗಂಡ ಮತ್ತು ಮಗಳ ಸಾವಿನ ಸುದ್ದಿ ಕೇಳಿ ಹೆಂಡತಿಗೆ ಆಕಾಶವೇ ಕಳಚಿ ಬಿದ್ದಂತಾಗಿದ್ದು, ಮನೆ ಮಂದಿಯ ಆಕ್ರಂದನ ಮುಗಿಲು ಮುಟ್ಟಿದೆ.ಸಾವನ್ನಪ್ಪಿದ ರಾಮ ಗೊಂಡ,ಬಡ ಕುಟುಂಬಕ್ಕೆ ಮುಖ್ಯ ಆಧಾರಸ್ತಂಭವಾಗಿದ್ದು, ಬಾಳಿ ಬದುಕಬೇಕಾದ ಮಗಳು ಸಾವಿಗೀಡಾಗಿರುವುದು ದುರಂತ.ಕುಟುAಬದ ಎರಡು ಆಧಾರ ಸ್ತಂಭವೇ ಕಳಚಿ ಬಿದ್ದಂತಾಗಿದೆ.
ಕುಟುAಬದಲ್ಲಿ ಆಕ್ರಂದನ ಕರಳು ಹಿಂಡುವAತಿದೆ. ಇದೀಗ ಒಂದೇ ಮನೆಯಲ್ಲಿ ಎರಡು ಸಾವುಗಳು ಕಂಡ ಕುಟುಂಬಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕಂಬನಿ ಮಿಡಿದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ