ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸವಿತಾ ಕಾಮತ್ ಮಾತನಾಡಿ, ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಸೋಂಕಿನವರಿಗಾಗಿಯೇ ಪ್ರತ್ಯೇಕ ವಾರ್ಡ ರಚಿಸಲಾಗಿದೆ. ಆದರೆ ಇಲ್ಲಿಯ ವರೆಗೆ ಯಾರಿಗೂ ವೈರಸ್ ಸೋಂಕಿಲ್ಲ. ಕೊರೋನಾ ವೈರಸ್ ಹರಡದಂತೆ ಅತೀ ಜಾಗೃತಿ ವಹಿಸಬೇಕಾಗಿದೆ. ಆರೋಗ್ಯದಲ್ಲಿ ಏರುಪೇರಾದಲ್ಲಿ ತಕ್ಷಣ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು. ಒಂದೊಮ್ಮೆ ರಕ್ತ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಕಂಡು ಬಂದಲ್ಲಿ ತಕ್ಷಣ ಅಂಥವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದ ಅವರು ಕೊರೋನಾ ವೈರಸ್ ಕುರಿತು ಭಯಬೇಡ, ಆದರೆ ಸದಾ ಮುಂಜಾಗ್ರತಾ ಕ್ರಮ ಕೈಗೊಂಡ ಎಚ್ಚರವಾಗಿರಬೇಕು ಎಂದರು.
ನAತರ ಮಾತನಾಡಿದ ತಹಸೀಲ್ದಾರ ವಿ ಪಿ ಕೊಟ್ರಳ್ಳಿ, ಭಟ್ಕಳ ತಾಲ್ಲೂಕಿನಾದ್ಯಂತ ಕೊರೋನಾ ವೈರಸ್ ಬರದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಯಾರಿಗಾದರೂ ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಮತ್ತು ಭೇದಿ ಕಾಣಿಸಿಕೊಂಡಲ್ಲಿ ತಕ್ಷಣ ಸರಕಾರಿ ಆಸ್ಪತ್ರೆಗೆ ಹೋಗಿ ತಪಾಸಿಸಿಕೊಳ್ಳಬೇಕು ಎಂದ ಅವರು ಈಗಾಗಲೇ ಭಟ್ಕಳ ಹಾಗೂ ಪ್ರವಾಸಿ ಕೇಂದ್ರವಾದ ಮುರ್ಡೇಶ್ವರದಲ್ಲಿ ಕೊರೋನಾ ಬರದಂತೆ ಜನಜಾಗೃತಿ ಮೂಡಿಸಲಾಗುತ್ತಿದೆ. ಮುರ್ಡೇಶ್ವರಕ್ಕೆ ಬರುವ ಪ್ರವಾಸಿಗರ ಮೇಲೆ ಕಣ್ಣಿಡಲಾಗಿದೆ. ಜನರು ಈ ವೈರಸ್ ಕುರಿತು ಅತೀ ಜಾಗೃತೆ ವಹಿಸಬೇಕು ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮೂರ್ತಿರಾಜ ಭಟ್ಟ ಮಾತನಾಡಿ, ಕೊರೋನಾ ವೈರಸ್ ಕುರಿತು ಎಲ್ಲಾ ಕಡೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲೇಬೇಕು. ಪ್ರವಾಸಿ ಕೇಂದ್ರ ಮುರ್ಡೇಶ್ವರದಲ್ಲಿ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ವಸತಿಗೃಹದವರಿಗೆ ಕೊರೋನಾ ವೈರಸ್ ಕುರಿತು ತಿಳಿಸಲಾಗಿದೆ. ಕೊರೋನಾ ವೈರಸ್ ತಡೆಗಟ್ಟಲು ಆರೋಗ್ಯ ಇಲಾಖೆಯವರಿಗೆ ಸಾರ್ವಜನಿಕರು ಸಹಕಾರ ನೀಡಬೇಕಲ್ಲದೇ ಅತೀ ಜಾಗರುಕರಾಗಿರಬೇಕು ಎಂದರು.
ಈ ಸಂದರ್ಭದಲ್ಲಿ ತಾ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಶಿರಸ್ಥೆದಾರ ಭಾಸ್ಕರ ಭಟ್ಟ ಮುಂತಾದವರಿದ್ದರು.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.