December 21, 2024

Bhavana Tv

Its Your Channel

ಶಾಸಕ ಡಾ.ಕೆ ಅನ್ನದಾನಿ ಆರೋಗ್ಯದಲ್ಲಿ ಚೇತರಿಕೆ

ಮಳವಳ್ಳಿ : ಕರೋನ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಡಾ ಕೆ ಅನ್ನದಾನಿ ಅವರು ಚಿಕಿತ್ಸೆಯಿಂದ ತಾನು ಚೇತರಿಸಿ ಕೊಳ್ಳುತ್ತಿದ್ದು ಪಕ್ಷದ ಮುಖಂಡರು ಕಾರ್ಯಕರ್ತರು ಹಿತೈಷಿಗಳು ಆತಂಕ ಪಡಬೇಕಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತು ವಾಟ್ಸಾಪ್ ಮೂಲಕ ಕ್ಷೇತ್ರದ ಜನತೆಗೆ ವಿಡಿಯೋ ಸಂದೇಶ ಕಳುಹಿಸಿರುವ ಅವರು ತಾನು ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ದಿನದಿಂದಲೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ದೇವಾಲಯಗಳಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸುತ್ತಿರುವ ಜೆಡಿಎಸ್ ಮುಖಂಡರು ಕಾರ್ಯಕರ್ತರಿಗೆ ತಮ್ಮ ಧನ್ಯವಾದಗಳನ್ನು ತಿಳಿಸಿದ್ದಾರೆ.
ನಮ್ಮೆಲ್ಲರ ಆಶೀರ್ವಾದದಿಂದ ನನ್ನ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು ನನ್ನ ಆರೋಗ್ಯದ ಬಗ್ಗೆ ಯಾವುದೇ ಆತಂಕ ಬೇಡ ಎಂದಿರುವ ಶಾಸಕರು ಇನ್ನು ಕೆಲವೇ ದಿನಗಳಲ್ಲಿ ಕ್ಷೇತ್ರದ ಜನರ ಸೇವೆಗೆ ಮರಳುವುದಾಗಿ ತಿಳಿಸಿದ್ದಾರೆ.

ವರದಿ: ಮಲ್ಲಿಕಾರ್ಜುನ ಮಳವಳ್ಳಿ

error: