December 22, 2024

Bhavana Tv

Its Your Channel

ಜಿಲ್ಲಾ ಹಾಗೂ ತಾಲೂಕ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಒಬಿಸಿ ರಾಜ್ಯಾಧ್ಯಕ್ಷ ನರೇಂದ್ರ ಬಾಬು ಕರೆ

ಮಳವಳ್ಳಿ : ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಓಬಿಸಿ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷದ ಓಬಿಸಿ ಮೋರ್ಚಾ ವತಿಯಿಂದ ಸಂಘಟನೆ ಮಾಡಲು ರಾಜ್ಯಾಧ್ಯಕ್ಷ ನೆಲ ನರೇಂದ್ರ ಬಾಬು ರವರ ಸೂಚನೆ ಮೇರೆಗೆ ಜಿಲ್ಲಾಧ್ಯದಂತ ಪ್ರವಾಸ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಸದಸ್ಯ,ಒಬಿಸಿ ಮೋರ್ಚಾ ಮಂಡ್ಯ ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತಿರುವ ಸೋಮಶೇಖರ್ ತಿಳಿಸಿದರು.
ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಒಬಿಸಿ ಮೋರ್ಚಾ ತಾಲ್ಲೂಕು ಘಟಕದ ಪದಾಧಿಕಾರಿಗಳು ಮತ್ತು ಮಂಡಲ, ಶಕ್ತಿ ಕೇಂದ್ರದ ಒಬಿಸಿ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ನಂತರ ಸುದ್ಧಿ ಗೋಷ್ಠಿ ನಡೆಸಿ ಮಾತನಾಡಿದ ಅವರು ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಕೆಲವು ಸ್ಥಾನಗಳನ್ನು ಗಳಿಸುವ ಮೂಲಕ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಶಕ್ತಿ ಬಂದಿದ್ದು ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ತಳ ಹಂತದಿAದ ಒಬಿಸಿ ಸಂಘಟನೆಗೆ ಒತ್ತು ನೀಡಲಾಗುತ್ತಿದೆ ಎಂದರು.
ಬಿಜೆಪಿ ಒಬಿಸಿ ಮೋರ್ಚಾ ಸಂಘಟನೆ ಮಾಡಲು ಪ್ರತಿ ಹಳ್ಳಿಯಲ್ಲಿ ಗಿಡ ನೆಡುವ ಮೂಲಕ ಜಿಲ್ಲೆಯಲ್ಲಿ ಒಂದು ಲಕ್ಷ ಗಿಡ ನೆಟ್ಟು ಒಬಿಸಿ ಜನರನ್ನು ಸಂಘಟಿಸಿ ಪಕ್ಷವನ್ನು ಬಲ ಪಡಿಸಲಾಗುವುದು, ಮುಂಬರುವ ಚುನಾವಣೆಯ ಒಬಿಸಿ ಮೀಸಲು ಕ್ಷೇತ್ರಗಳಲ್ಲಿ ಸ್ಥಳೀಯವಾಗಿ ಉತ್ತಮವಾದ ಕಾರ್ಯ ನಿರ್ವಹಿಸಿ ಪಕ್ಷದ ಸಂಘಟನೆಗೆ ಕಾರಣರಾದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿ ಗೆಲ್ಲಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಸುದ್ದಿ ಗೋಷ್ಠಿಯಲ್ಲಿ,ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜು, ತಾಲ್ಲೂಕು ಅಧ್ಯಕ್ಷ ಲಿಂಗರಾಜು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗರಾಜು, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನಾಗೇಗೌಡ, ಬಿಜೆಪಿ ಮುಖಂಡ ಹಲಗೂರು ಗಿರೀಶ್ ಸೇರಿದಂತೆ ಒಬಿಸಿ ಮಂಡಲ ಮತ್ತು ಶಕ್ತಿ ಕೇಂದ್ರದ ಪದಾಧಿಕಾರಿಗಳು ಭಾಗವಹಿಸಿದ್ದರು.

ಮಲ್ಲಿಕಾರ್ಜುನ ಮಳವಳ್ಳಿ

error: