ಮಳವಳ್ಳಿ : ಮಳವಳ್ಳಿ ಪುರಸಭೆಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪುಟ್ಟಸ್ವಾಮಿ ಅವರು ತಮ್ಮ ಕಚೇರಿಯಲ್ಲಿ ವಿಶೇಷ ಪೂಜೆ ಮಾಡುವ ಮೂಲಕ ತಮ್ಮ ಅಧಿಕಾರ ವಹಿಸಿಕೊಂಡರು.
ಇAದು ಬೆಳಿಗ್ಗೆ ಪುರಸಭೆಯ ತಮ್ಮ ಕೊಠಡಿಯಲ್ಲಿ ಪುರಸಭೆಯ ಅಧ್ಯಕ್ಷರಾದ ರಾಧಾ ನಾಗರಾಜು, ಉಪಾಧ್ಯಕ್ಷರಾದ ಟಿ ನಂದಕುಮಾರ್ ಅವರ ಸಮ್ಮುಖದಲ್ಲಿ ವಿಶೇಷ ಪೂಜೆ ನಡೆಸಿದ ಪುಟ್ಟಸ್ವಾಮಿ ಅವರು ನಂತರ ತಮ್ಮ ಅಧಿಕಾರ ವಹಿಸಿಕೊಂಡರು.
ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಪುಟ್ಟಸ್ವಾಮಿ ಅವರನ್ನು ಪುರಸಭಾಧ್ಯಕ್ಷೆ ರಾಧ ನಾಗರಾಜು, ಉಪಾಧ್ಯಕ್ಷ ಟಿ ನಂದಕುಮಾರ್, ಮಾಜಿ ಅಧ್ಯಕ್ಷ ದೊಡ್ಡಯ್ಯ, ಸೇರಿದಂತೆ ಹಲವಾರು ಸದಸ್ಯರು, ಮುಖಂಡರು, ಅಭಿನಂದಿಸಿ ಶುಭ ಹಾರೈಸಿದರು.
ಅಧಿಕಾರ ವಹಿಸಿಕೊಂಡರ ನಂತರ ಮಾತನಾಡಿದ ಪುಟ್ಟಸ್ವಾಮಿ ಅವರು ಕ್ಷೇತ್ರದ ಶಾಸಕರಾದ ಡಾ ಕೆ ಅನ್ನದಾನಿ ಅವರ ಸಹಕಾರ ಹಾಗೂ ಎಲ್ಲಾ ಸದಸ್ಯರ ಬೆಂಬಲದೊAದಿಗೆ ತಾನು ಸ್ಥಾಯಿ ಸಮಿತಿ ಅಧ್ಯಕ್ಷನಾಗಿ ಆಯ್ಕೆಯಾಗಿದ್ದು ತನ್ಯ ಅಧಿಕಾರಾವಧಿಯಲ್ಲಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಪುರಸಭಾಧ್ಯಕ್ಷ ದೊಡ್ಡಯ್ಯ, ಮುಖಂಡರಾದ ಪೊತಂಡೆ ನಾಗರಾಜು, ನಾರಾಯಣ, ಅಂಕನಾಥ್ ಮಾರೇಹಳ್ಳಿ ಕಿಟ್ಟಿ, ಸದಸ್ಯರಾದ ನೂರುಲ್ಲಾ,, ಪ್ರಶಾಂತ್, ಕುಮಾರ್, ಸಿದ್ದರಾಜು, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದು ನೂತನ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಅಭಿನಂದಿಸಿದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ