ಮಳವಳ್ಳಿ : ತಾಲ್ಲೂಕಿನ ಅಮೃತೇಶ್ವರಹಳ್ಳಿ ಕಾಲೋನಿ ಬಳಿ ಕೆಂಬೂತಗೆರೆ ರಸ್ತೆಯ ಕಾಲುವೆಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.
ಮದ್ದೂರು ತಾಲ್ಲೂಕು ಮೆಣಸಗೆರೆ ಗ್ರಾಮದ ಕೆಂಪಾಜಮ್ಮ ಎಂಬುವರೇ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದ್ದು, ಕೆಂಪಾಜಮ್ಮ ಕಾಲುವೆಯಲ್ಲಿ ಬಟ್ಟೆ ಒಗೆಯುವ ವೇಳೆ ಕಾಲು ಜಾರಿ ಬಿದ್ದು ಕಾಲುವೆಯಲ್ಲಿ ಕೊಚ್ಚಿಹೋಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ
ಸ್ಥಳಕ್ಕೆ ಗ್ರಾಮಾಂತರ ಸಬ್ ಇನ್ಸ್ಪೆಕ್ಟರ್ ರವಿಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಶವವನ್ನು ಮರಣೋತ್ತರ ಪರೀಕ್ಷೆ ನಡಸಿ ವಾರಸುದಾರರಿಗೆ ಒಪ್ಪಿಸಲಾಯಿತು. ಮಳವಳ್ಳಿ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ