ಮಳವಳ್ಳಿ : ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಶವವನ್ನು ಗ್ರಾಮದ ಹೊರಗಿನ ಜಮೀನಿನಲ್ಲಿ ಹೂತು ಪರಾರಿಯಾಗಿ ಆರೋಪಿಯನ್ನು ಮಳವಳ್ಳಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಕಲ್ಲುವೀರನಹಳ್ಳಿ ಗ್ರಾಮದ ಶಿವರಾಜು ಎಂಬಾತನೇ ಬಂಧಿತ ಆರೋಪಿಯಾಗಿದ್ದು ಕಳೆದ ಶುಕ್ರವಾರ ಸಾಯಂಕಾಲ ಮನೆಯಲ್ಲಿದ್ದ ತನ್ನ ಪತ್ನಿ ರಾಣಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಅರೋಪಿಯು ಮಧ್ಯ ರಾತ್ರಿ ಶವವನ್ನು ಗ್ರಾಮದ ಹೊರವಲಯದ ಸತೀಶ್ ಎಂಬುವವರ ಜಮೀನಿನ ಬಳಿ ಹೊತ್ತೊಯ್ದು ಶವವನ್ನು ಹೂತು ಪರಾರಿಯಾಗಿದ್ದ ಎಂದು ಆರೋಪಿಸಲಾಗಿತ್ತು,
ಪತ್ನಿಯ ಶೀಲದ ಮೇಲಿನ ಶಂಕೆಯೇ ಈ ಕೊಲೆಗೆ ಕಾರಣ ಎನ್ನಲಾಗಿದ್ದು ತನ್ನ ಜಮೀನಿನಲ್ಲಿ ರಕ್ತದ ಕಲೆ ಇರುವ ಜಾಗದಲ್ಲಿ ಶವವೊಂದನ್ನು ಕಂಡ ಜಮೀನಿನ ಮಾಲೀಕ ನೀಡಿದ ದೂರಿನ ಮೇರೆಗೆ ತನಿಖೆ ಕೈಗೊಂಡ ಗ್ರಾಮಾಂತರ ಪೊಲೀಸರು ಪರಾರಿಯಾಗಿದ್ದ ಆರೋಪಿ ಶಿವರಾಜು ನನ್ನು ಇಂದು ಬಂಧಿಸಿ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಆರೋಪಿ ಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆರೋಪಿ ಶಿವರಾಜು ತನ್ನ ಪತ್ನಿ ರಾಣಿಯ ಜೊತೆ ಬೆಂಗಳೂರಿನಲ್ಲಿ ವಾಸವಿದ್ದು ಕೊಲೆ ಪ್ರಕರಣವೊಂದರ ಆರೋಪಿಯಾಗಿ ಕಳೆದ ೭ವರ್ಷಗಳ ಕಾಲ ಸೆರೆವಾಸ ಅನುಭವಿಸಿ ಕಳೆದ ಆರು ತಿಂಗಳ ಹಿಂದೆಯಷ್ಟೇ ಬಿಡುಗಡೆ ಗೊಂಡು ಪತಿಪತ್ನಿ ಇಬ್ಬರು ತಮ್ಮ ಸ್ವಗ್ರಾಮವಾದ ಕಲ್ಲುವೀರನಹಳ್ಳಿಗೆ ಬಂದು ನೆಲೆಸಿದ್ದರು ಎಂದು ಗೊತ್ತಾಗಿದೆ.
ಈ ನಡುವೆ ಪತ್ನಿಯ ಶೀಲದ ಬಗ್ಗೆ ಶಂಕೆಗೊoಡ ಶಿವರಾಜು ಇದೇ ವಿಚಾರವಾಗಿ ಪತಿ ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿದ್ದು ಇದೇ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಗ್ರಾಮಾಂತರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಲವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ