ಮಳವಳ್ಳಿ : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಪಟ್ಟಣದಲ್ಲಿ ಇಂದು ಹಲವು ಸೇವಾ ಕಾರ್ಯಗಳ ಮೂಲಕ ಅರ್ಥ ಪೂರ್ಣವಾಗಿ ಆಚರಿಸಿದರು.
ಅಖಿಲ ಕರ್ನಾಟಕ ವಾಲ್ಮೀಕಿ ಬಾದ್ ಷಾ ಕಿಚ್ಚ ಸುದೀಪ್ ಸೇನೆಯ ವತಿಯಿಂದ ಸಂಘದ ರಾಜ್ಯಾಧ್ಯಕ್ಷ ಶಿವರಾಜ್ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದ ಪದಾಧಿಕಾರಿ ಗಳು, ಸದಸ್ಯರು, ಅಭಿಮಾನಿಗಳು ಮೊದಲಿಗೆ ಪಟ್ಟಣದ ಹೊರವಲಯದ ಮಾರೇಹಳ್ಳಿ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುದೀಪ್ ಅವರಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಕಿಚ್ಚನ ಪರ ಜಯಘೋಷಗಳನ್ನು ಮೊಳಗಿಸಿದರು.
ನಂತರ ಸುದೀಪ್ ಅವರ ಜನ್ಮದಿನದ ಅಂಗವಾಗಿ ರೋಟರಿ ಶಾಲಾ ಆವರಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಹಲವಾರು ಅಭಿಮಾನಿಗಳು ತಮ್ಮ ರಕ್ತದಾನ ಮಾಡುವ ಮೂಲಕ ತಮ್ಮ ಅಭಿಮಾನ ಮೆರೆದರು.
ನಂತರ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿದರು ಜೊತೆಗೆ ಪಟ್ಟಣದ ಗಂಗಾಮತ ಬಡಾವಣೆಯಲ್ಲಿನ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಿದರು.
ಅಂತಿಮವಾಗಿ ಶ್ರೀ ರಾಮರೂಢ ಮಠದ ಆವರಣದಲ್ಲಿ ಕೇಕ್ ಕತ್ತರಿಸಿ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಆಚರಿಸಿ ಸಂಭ್ರಮಿ ಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಶಿವರಾಜ್ ನಾಯಕ್ ಅವರು ಸ್ಯಾಂಡಲ್ ವುಡ್ ಅಷ್ಟೇ ಅಲ್ಲದೇ ಬಾಲಿವುಡ್ ಸಿನಿಮಾಗಳಲ್ಲೂ ತಮ್ಮ ಅಮೋಘ ಅಭಿನಯದ ಮೂಲಕ ರಾಷ್ಟ್ರೀಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸುತ್ತಿರುವ ನಮ್ಮ ಆರಾಧ್ಯ ದೈವ ಕಿಚ್ಚ ಸುದೀಪ್ ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮ ದಲ್ಲಿ ಸಂಘಟನೆಯ ಪದಾಧಿಕಾರಿ ಗಳಾದ ಶಿವಕುಮಾರ್, ಗುರುಸಿದ್ದಯ್ಯ, ನಾಗರಾಜು, ರಘು , ಮಧುಚಂದ್ರ ಬಸವರಾಜು, ಮತ್ತಿತರರು ಪಾಲ್ಗೊಂಡಿದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ