ಮಳವಳ್ಳಿ : ತಾಲೂಕಿನ ಪ್ರತೀ ಗ್ರಾಮಕ್ಕೂ ಉತ್ತಮ ಗುಣಮಟ್ಟದ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡುವುದು ನನ್ನ ಗುರಿಯಾಗಿದೆ ಎಂದು ಶಾಸಕ ಡಾ. ಕೆ ಅನ್ನದಾನಿ ಹೇಳಿದ್ದಾರೆ.
ಅವರು ಮಂಗಳವಾರ ಒಟ್ಟು ೨.೨೦ ಕೋಟಿ ರೂ ವೆಚ್ಚದಲ್ಲಿ ತಾಲೂಕಿನ ಮಲ್ಲಿಕ್ಯಾತನಹಳ್ಳಿ, ಹೊಸಹಳ್ಳಿ, ಬಿ ಟಿ ಕೊಪ್ಪಲು, ಬೆಳಕವಾಡಿ, ಕಲ್ಯಾಣಿ ಕೊಪ್ಪಲು, ಉಪ್ಪಲಗೆರೆ ಕೊಪ್ಪಲು, ರಾಗಿಬೊಮ್ಮನಹಳ್ಳಿ ಗ್ರಾಮಗಳಲ್ಲಿ ಸಿ ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ ಗ್ರಾಮೀಣ ಭಾಗದಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ಇದನ್ನು ಸರಿಪಡಿಸುವ ಉದ್ದೇಶ ದಿಂದ ಎಸ್ ಪಿ ಟಿ ಎಸ್ ಪಿ ಯೋಜನೆಯಡಿ ರಸ್ತೆ ಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದರ ಜೊತೆಗೆ ಗ್ರಾಮೀಣ ಭಾಗದ ಪ್ರತೀ ಮನೆಗೂ ಕೊಳಾಯಿ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಜೆ.ಜೆ.ಎಂ ಯೋಜನೆ ಸಹ ಬಹುತೇಕ ಗ್ರಾಮಗಳಲ್ಲಿ ಭರದಿಂದ ಸಾಗಿದ್ದು ಹಲವು ಗ್ರಾಮಗಳಲ್ಲಿ ಕಾಮಗಾರಿ ಮುಗಿಯುವ ಹಂತದಲ್ಲಿದ್ದು ಇದರಿಂದ ನಗರ ಪ್ರದೇಶಗಳಂತೆ ಗ್ರಾಮೀಣ ಜನರು ಸಹ ಕೊಳಾಯಿ ಮೂಲಕ ಶುದ್ಧ ಕುಡಿಯುವ ನೀರು ಪಡೆಯಲಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇಗೌಡ, ಮಹಾದೇವು, ಲೋಕೋಪ ಯೋಗಿ ಇಲಾಖೆಯ ಎಇಇ ಪುಟ್ಟಸ್ವಾಮಿ ಸೇರಿದಂತೆ ಹಲವಾರು ಪ್ರಮುಖರು ಹಾಜರಿದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ