December 22, 2024

Bhavana Tv

Its Your Channel

ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಶಾಸಕ ಡಾ ಕೆ ಅನ್ನದಾನಿ

ಮಳವಳ್ಳಿ : ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿ ಇರುವ ವಿಶ್ವ ವಿಖ್ಯಾತ ಗಗನಚುಕ್ಕಿ ಜಲಪಾತ ಆವರಣದಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಯ ಅನುಕೂಲಕ್ಕಾಗಿ ನಿರ್ಮಾಣಗೊಳ್ಳುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಡಾ ಕೆ ಅನ್ನದಾನಿ ಕಾಮಗಾರಿ ಪರಿಶೀಲನೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಶ್ವ ವಿಖ್ಯಾತವಾದ ಗಗನಚುಕ್ಕಿ ಜಲಪಾತ ಹಾಗೂ ಏಷ್ಯಾ ಖಂಡದಲ್ಲೇ ಪ್ರಪ್ರಥಮವಾಗಿ ಪ್ರಾರಂಭವಾದ ಜಲ ವಿದ್ಯುತ್ ಉತ್ಪಾದನಾ ಘಟಕ ಐತಿಹಾಸಿಕ ಹಾಗೂ ನಮ್ಮ ಮಳವಳ್ಳಿ ಯ ಹೆಮ್ಮೆಯಾಗಿದ್ದು ಈ ಜಲಪಾತಕ್ಕೆ ಇನ್ನಷ್ಟು ಮೆರಗು ನೀಡುವ ಉದ್ದೇಶ ದಿಂದ ಇಲ್ಲಿ ಸುಮಾರು ೫ ಕೋಟಿ ವೆಚ್ಚದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ಗಳನ್ನು ಕೈಗೆತ್ತಿ ಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಮುಖವಾಗಿ ಒಂದು ಸಾವಿರ ಜನರು ಏಕಕಾಲಕ್ಕೆ ಕುಳಿತು ಜಲಪಾತವನ್ನು ವೀಕ್ಷಿಸುವಂತೆ ಹಂತ ಹಂತವಾದ ಮೆಟ್ಟಲುಗಳ ಸಾಲು, ಹುಲ್ಲು ಹಾಸಿಗೆ ಜಲಪಾತವನ್ನು ಹತ್ತಿರದಿಂದ ವೀಕ್ಷಿಸಲು ಅನುಕೂಲವಾಗುವಂತೆ ಮೆಟ್ಟಿಲುಗಳು, ಪ್ರವಾಸಿಗರ ರಕ್ಷಣೆಗಾಗಿ ರಕ್ಷಣಾ ಕಂಬಿಗಳ ಅಳವಡಿಕೆ, ಹೈಮಾಸ್ ಲೈಟ್‌ಗಳ ಅಳವಡಿಕೆ ಸೇರಿದಂತೆ ಇನ್ನಿತರ ಕಾಮಗಾರಿಗಳು ಇದರಲ್ಲಿ ಸೇರಿವೆ ಎಂದು ಅವರು ವಿವರಿಸಿದರು.
ಈಗಾಗಲೇ ಜಲಪಾತದ ಆವರಣದಲ್ಲಿ ಶೌಚಾಲಯ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದ ಶಾಸಕರು ಪ್ರತೀ ವರ್ಷದಂತೆ ಈ ಭಾರಿ ಸಹ ಜಲಪಾತೋತ್ಸವ ಕಾರ್ಯಕ್ರಮ ನಡೆಸುವ ತೀರ್ಮಾನ ಕೈಗೊಳ್ಳಲಾಗಿದ್ದು ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಜೊತೆ ಚೆರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇಗೌಡ, ಟಿ ಎ ಪಿ ಸಿ ಎಂ ಎಸ್ ನಿರ್ಧೇಶಕ ರಾಜೇಶ್, ಲೋಕೋಪಯೋಗಿ ಇಲಾಖೆಯ ಎಇಇ ಪುಟ್ಟಸ್ವಾಮಿ, ಸೇರಿದಂತೆ ಹಲವಾರು ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: