ಮಳವಳ್ಳಿ : ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಗ್ರಾಮದ ದಲಿತ ವಿದ್ಯಾರ್ಥಿನಿಯರು ಹಾಗೂ ಅವರ ಕುಟುಂಬದವರ ಮೇಲೆ ಸವರ್ಣಿಯರ ಗುಂಪೊAದು ಅಮಾನುಷವಾಗಿ ಹಲ್ಲೆ ಮಾಡಿ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ಮಳವಳ್ಳಿಯ ತಾಲ್ಲೂಕು ಕಚೇರಿ ಮುಂದೆ ವಿವಿಧ ದಲಿತಪರ ಸಂಘಟನೆ ಗಳ ಮುಖಂಡರು ಪ್ರತಿಭಟನೆ ನಡೆಸಿದರು.
ದಲಿತ ಹಕ್ಕುಗಳ ಸಮಿತಿ, ರಾಜ್ಯ ಶೋಷಿತ ಸಮುದಾಯಗಳ ವೇದಿಕೆ, ಹಾಗೂ ಇನ್ನಿತರ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಸರ್ಕಾರ ಹಾಗೂ ಕೋಲಾರ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಜಿ ಪಂ ಸದಸ್ಯರಾದ ಎಂ ಎನ್ ಜಯರಾಜು ಅವರು ದಲಿತ ಚಳುವಳಿಯ ತವರೂರು ಎಂದೇ ಹೆಸರು ಗಳಿಸಿರುವ ಅದರಲ್ಲೂ ಪ್ರಗತಿಪರ ಚಿಂತನೆಯನ್ನು ಸದಾ ಪ್ರತಿಪಾದಿಸುವ ರಮೇಶ್ ಕುಮಾರ್ ಅವರು ಶಾಸಕರಾಗಿರುವ ಕ್ಷೇತ್ರದಲ್ಲಿ ಇಂತಹ ಅಮಾನುಷ ಕೃತ್ಯ ನಡೆದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಖಂಡಿಸಿದರು.
ಕಾಲೇಜಿಗೆ ಬಸ್ಸಿನಲ್ಲಿ ಹೋಗುವ ದಲಿತ ಹೆಣ್ಣು ಮಕ್ಕಳನ್ನು ಆ ಗ್ರಾಮದ ಸವರ್ಣೀಯ ಪುಂಡರ ಗುಂಪು ಚುಡಾಯಿಸಿ ಮಾನಸಿಕವಾಗಿ ದೌರ್ಜನ್ಯ ನಡೆಸುತ್ತಿದ್ದವರನ್ನು ಪ್ರಶ್ನಿಸಿದ ವಿದ್ಯಾರ್ಥಿನಿಯರು ಹಾಗೂ ಅವರ ಕುಟುಂಬದವರನ್ನು ಬಸ್ಸಿನಿಂದ ಕೆಳಗೆ ಎಳೆದು ತಂದ ೫೦ ಮಂದಿ ಪುಂಡರ ಗುಂಪು ಅಮಾನುಷವಾಗಿ ಹಲ್ಲೆ ಮಾಡಿ ದೌರ್ಜನ್ಯ ನಡೆದಿರುವುದು ಕೋಲಾರ ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲಿ ದಲಿತ ಹೆಣ್ಣು ಮಕ್ಕಳು ಹಾಗೂ ದಲಿತರ ಮೇಲೆ ಯಾವ ರೀತಿ ದೌರ್ಜನ್ಯ ದಬ್ಬಾಳಿಕೆ ನಡೆಯುತ್ತಿದೆ ಎಂಬುದಕ್ಕೆ ಉದಾಹರಣೆ ಯಾಗಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರಕರಣ ಮರೆಮಾಚಲು ದಲಿತ ಕುಟುಂಬದವರ ಮೇಲೆ ಕೌಂಟರ್ ಕೇಸ್ ಹಾಕಲು ಮುಂದಾಗಿರುವ ಕ್ರಮವನ್ನು ಖಂಡಿಸಿದ ಜಯರಾಜು ಅವರು ಕೂಡಲೇ ಆರೋಪಗಳನ್ನು ಬಂಧಿಸುವುದರ ಜೊತೆಗೆ ದಲಿತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು.ದೌರ್ಜನ್ಯಕ್ಕೆ ಒಳಗಾದವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭರತ್ ರಾಜ್, ಆರ್ ಕೃಷ್ಣ, ಚಿಕ್ಕಸ್ವಾಮಿ, ಲಿಂಗದೇವರು, ಎಂ ಡಿ ಶಂಕರ್, ಮಲ್ಲಿಕಾರ್ಜುನ ಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ