December 22, 2024

Bhavana Tv

Its Your Channel

ಮನೆ ಬಾಗಿಲಿಗೇ ಬರಲಿದೆ ಅಗತ್ಯ ವಸ್ತುಗಳು; ಡೋರ್ ಟು ಡೋರ್ ಸರ್ವಿಸ್ ಗೆ ಜಿಲ್ಲಾಡಳಿತದಿಂದ ಸಿದ್ಧತೆ

ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಅನಾವಶ್ಯಕವಾಗಿ ಮನೆಯಿಂದ ಹೊರ ಬಂದು ಓಡಾಟ ನಡೆಸುವುದನ್ನ ತಪ್ಪಿಸಲು ಜಿಲ್ಲಾಡಳಿತ ಮನೆ ಬಾಗಿಲಿಗೆ ವಸ್ತುಗಳನ್ನ ಕೊಡುವ ಕ್ರಮಕ್ಕೆ ಮುಂದಾಗಿದೆ.

ರಾಜ್ಯದಲ್ಲಿಯೇ ಪ್ರಥಮ ಪ್ರಯತ್ನ ಎನ್ನುವಂತೆ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದ್ದು ಈಗಾಗಲೇ ಅಗತ್ಯ ವಸ್ತುಗಳ ಮಾರಾಟಗಾರರಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಪಾಸ್ ವಿತರಣೆ ಮಾಡಲು ಮುಂದಾಗಿದೆ.

ಈಗಾಗಲೇ ಕೊರೋನಾ ವೈರಸ್ ತಡೆಗೆ ದೇಶಾದ್ಯಂತ ಲಾಕ್ ಡೌನ್ ಆಗಿದ್ದರು ಅಗತ್ಯ ವಸ್ತುಗಳ ಖರೀದಿ ನೆಪ ಹೇಳಿ ಹಲವರು ಜಿಲ್ಲೆಯಲ್ಲಿ ಅನವಶ್ಯಕವಾಗಿ ಮನೆ ಬಿಟ್ಟು ಹೊರ ಬರುತ್ತಿದ್ದಾರೆ. ಜನರು ಗುಂಪು ಗುಂಪಾಗಿ ಸೇರುತ್ತಿರುವುದರಿಂದ ವೈರಸ್ ಹರಡುವ ಸಾಧ್ಯತೆ ಮನಗೊಂಡು ಮನೆ ಮನೆಗೆ ಅಗತ್ಯ ವಸ್ತುಗಳ ವಿತರಣೆ ಮಾಡಲು ಜಿಲಾಡಳಿತ ಮುಂದಾಗಿದೆ.

ಅಗತ್ಯ ವಸ್ತುಗಳಾದ ದಿನಸಿ, ಹಾಲು, ತರಕಾರಿ, ಮೊಟ್ಟೆ, ಸೀಲ್ಡ್ ನೀರನ್ನ ವ್ಯಾಪಾರಸ್ಥರ ಮೂಲಕ ಮನೆಗಳ ಬಳಿಯೇ ಬಂದು ವಿತರಣೆ ಮಾಡಲು ಕ್ರಮಕ್ಕೆ ಮುಂದಾಗಿದೆ. ಪ್ರತ್ಯೇಕ ವಾರ್ಡಗಳಿಗೆ ವ್ಯಾಪಾರಸ್ಥರನ್ನ ವಿಂಗಡಿಸಿ ವಸ್ತುಗಳ ವಿತರಣೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದು ಜನರು ನಿಮ್ಮ ಸುರಕ್ಷತೆಗೆ ಮನೆಯಲ್ಲಿಯೇ ಸಮಯ ಕಳೆಯಿರಿ, ಅಗತ್ಯ ವಸ್ತುವನ್ನ ಜಿಲ್ಲಾಡಳಿತವೇ ಮನೆಯ ಬಾಗಿಲಿಗೆ ತಲುಪಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಮನವಿ ಮಾಡಿದ್ದಾರೆ.

error: