December 22, 2024

Bhavana Tv

Its Your Channel

ತಾಲ್ಲೂಕು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕೋವಿಡ್ ಉಪಕರಣ ಹಸ್ತಾಂತರಿಸಿದ ಸಂಸದೆ ಸುಮಲತಾ ಅಂಬರೀಶ್

ಮಳವಳ್ಳಿ: ಸ್ಕೋಪ್ ಫೌಂಡಷೇನ್ ಇಂಡಿಯಾ ವತಿಯಿಂದ ತಾಲ್ಲೂಕು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕೋವಿಡ್ ಉಪಕರಣಗಳನ್ನು ಸಂಸದೆ ಸುಮಲತಾ ಅಂಬರೀಶ್ ಅವರು ತಾಲ್ಲೂಕು ಆಡಳಿತಕ್ಕೆ ಹಸ್ತಾಂತರಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸ್ತಾಂತರ ಮಾಡಿ ಅವರು ಮಾತನಾಡಿ, ಕೋವಿಡ್ ಸೋಂಕು ನಿಯಂತ್ರಣದ ವಿಚಾರದಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಾ ಬಂದಿದ್ದೇವೆ. ಇಂತಹ ಸಂಕಷ್ಟದ ಸಮಯದಲ್ಲಿ ಹಲವು ದಾನಿಗಳು ಸರ್ಕಾರದ ಜತೆಯಲ್ಲಿ ಕೈಜೋಡಿಸಿ ನೆರವು ನೀಡಿದ್ದಾರೆ.
ಅಧಿಕಾರಿಗಳ ಜತೆ ಹಗಲಿರುಳು ದುಡಿಯುತ್ತಿರುವ ಅಂಗನವಾಡಿ ಆಶಾ ಕಾರ್ಯಕರ್ತೆಯರಿಗೆ ತಮ್ಮ ಪ್ರಾಣದ ಹಂಗುತೊರೆದು ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಕೆಲಸ ಮಾಡುತ್ತಿದ್ದು, ಅಂತಹವರಿಗೆ ಜಿಲ್ಲೆಯ ಸಂಸ್ಥಾಪಿಸುವ ಸ್ಕೋಪ್ ಫೌಂಡಷೇನ್ ಇಂಡಿಯಾ ಅವರು ಜಿಲ್ಲೆಗೆ ೩.೫ ಕೋಟಿ ರೂ.ವೆಚ್ಚದ ಕೋವಿಡ್ ನಿಯಂತ್ರಣದ ಉಪಕರಣಗಳನ್ನು ನೀಡಿರುವುದು ನಿಜಕ್ಕೂ ಶ್ಲಾಘನೀಯವಾಗಿದ ಎಂದರು.
ತಹಶೀಲ್ದಾರ್ ಎಂ.ವಿಜಯಣ್ಣ, ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಮಾಧವ ನಾಯಕ್, ಪುರಸಭೆ ಸದಸ್ಯರಾದ ರಾಜಶೇಖರ್, ಶಿವಕುಮಾರ್ ಸೇರಿದಂತೆ ಹಲವರು ಇದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: