December 21, 2024

Bhavana Tv

Its Your Channel

ಕೆಎಸ್‌ಆರ್‌ಟಿಸಿ ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಾಮವಾಡಗಿ ಮಾರ್ಗವಾಗಿ ಜಾಲಕಮಲದಿನ್ನಿಗೆ ಹೋಗುವ ಕೆಎಸ್‌ಆರ್‌ಟಿಸಿ ಬಸ್ ಸರಿಯಾದ ಸಮಯಕ್ಕೆ ಬರುತ್ತಿಲ್ಲ ಎಂದು ರಾಮವಾಡಗಿ ಗ್ರಾಮದ ಹತ್ತಿರ ಶಾಲಾ ಕಾಲೇಜು ವಿದ್ಯಾರ್ಥಿಗಳು ಹುನಗುಂದ ಡಿಪೋ ದ ಬಸ್ಸುಗಳನ್ನು ತಡೆದು ಪ್ರತಿಭಟನೆ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದರು. ಸರಿಯಾದ ಸಮಯಕ್ಕೆ ಬಸ್ ಬರದೆ ಇರುವ ಕಾರಣ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಸರಿಯಾಗಿ ತಲುಪಲು ಆಗುತ್ತಿಲ್ಲ ಎಂದರು,
ಕೂಡಲೇ ಸಂಬAಧಿಸಿದ ಹುನಗುಂದ ಡಿಪೋ ಮ್ಯಾನೇಜರ್ ಅವರು ತಾಲೂಕಿನ ಹಳ್ಳಿಗಳಿಗೆ ಹೋಗುವ ಬಸ್ಸುಗಳನ್ನು ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಬಸ್ ಸೇವೆಯನ್ನು ಕಲ್ಪಿಸಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ

ವರದಿ: ಮಾಂತೇಶ ಕುರಿ

error: