ಮಳವಳ್ಳಿ : ರೈತರಿಗೆ ರಸ ಗೊಬ್ಬರ ಪೂರೈಕೆ ಮಾಡುವಲ್ಲಿ ವಿಫಲವಾಗಿರುವ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವೈಫಲ್ಯವನ್ನು ಖಂಡಿಸಿ ಸೊಸೈಟಿ ವಾಣಿಜ್ಯ ಕೇಂದ್ರವನ್ನು ಬಂದ್ ಮಾಡುವ ಮೂಲಕ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ಇಂದು ಬೆಳಿಗ್ಗೆ ಸೊಸೈಟಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಸೊಸೈಟಿ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳನ್ನು ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದರು.
ಜೊತೆಗೆ ರೈತರಿಗೆ ಸಕಾಲಕ್ಕೆ ರಸಗೊಬ್ಬರ ಪೂರೈಕೆ ಮಾಡುವಲ್ಲಿ ವಿಫಲವಾಗಿರುವ ಆಡಳಿತ ಮಂಡಳಿ ವಿರುದ್ದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘಟನೆ ಮುಖಂಡ ಟಿ ಎಲ್ ಕೃಷ್ಣೇಗೌಡ, ಶಿವಣ್ಣ, ಅವರು ಭ್ರಷ್ಟಾಚಾರದ ಮೂಲಕ ಸೊಸೈಟಿ ಹಣವನ್ನು ಲೂಟಿ ಮಾಡಿರುವ ಆಡಳಿತ ಮಂಡಳಿಯವರ ದುರಾಡಳಿತದಿಂದಾಗಿ ರಸಗೊಬ್ಬರ ಖರೀದಿಗೂ ಹಣವಿಲ್ಲದಂತೆ ಸೊಸೈಟಿ ದಿವಾಳಿಯಾಗಿದೆ ಎಂದು ಆರೋಪಿಸಿದರು.
ಸೊಸೈಟಿ ಯಲ್ಲಿನ ಭ್ರಷ್ಟಾಚಾರದ ವಿರುದ್ಧ ನಡೆಯುತ್ತಿದ್ದ ತನಿಖೆಗೆ ಆಡಳಿತ ಮಂಡಳಿ ಲಕ್ಷಾಂತರ ರೂ ಹಣ ಖರ್ಚು ಮಾಡಿ ಹೈಕೋರ್ಟ್ ನಿಂದ ತಡೆಯಾಜ್ಞೆ ತಂದಿರುವುದೇ ಆಡಳಿತ ಮಂಡಳಿಯ ದುರಾಡಳಿತಕ್ಕೆ ಹಿಡಿದ ಕನ್ನಡಿ ಎಂದು ಟೀಕಿಸಿದ ಮುಖಂಡರು ಕೂಡಲೇ ರೈತರಿಗೆ ಅಗತ್ಯ ರಸ ಗೊಬ್ಬರ ಒದಗಿಸಬೇಕು, ಸಾಲಗಾರರ ಪಟ್ಟಿ ಬಿಡುಗಡೆ ಮಾಡಬೇಕು, ಎಂದು ಆಗ್ರಹಿಸಿದರು.
ಪ್ರತಿಭಟನಾ ನಿರತರ ಬೇಡಿಕೆಯಂತೆ ಸೋಮವಾರದಿಂದ ರಸಗೊಬ್ಬರ ಪೂರೈಕೆ ಮಾಡುವುದರ ಜೊತೆಗೆ ಸಾಲಗಾರರ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಸೊಸೈಟಿ ಸಿಇಓ ರಮೇಶ್ ಭರವಸೆ ನೀಡಿದ ನಂತರ ಪ್ರತಿಭಟನೆ ಕೈ ಬಿಡಲಾಯಿತು.
ಪ್ರತಿಭಟನೆಯಲ್ಲಿ ಟಿ ಹೆಚ್ ಆನಂದ್, ಚೌಡೇಗೌಡ, ಟಿ ಎಂ ಪ್ರಕಾಶ್ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು..
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ