December 22, 2024

Bhavana Tv

Its Your Channel

ಭಾರತ್ ಬಂದ್‌ಗೆ ಮಳವಳ್ಳಿ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ

ಮಳವಳ್ಳಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ಬೆಲೆ ಏರಿಕೆ ಕ್ರಮ ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಕರೆ ನೀಡಿದ ಭಾರತ್ ಬಂದ್‌ಗೆ ಮಳವಳ್ಳಿ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಪಟ್ಟಣದ ಬಹುತೇಕ ಅಂಗಡಿ ಮುಂಗಟ್ಟುಗಳು ವಾಣಿಜ್ಯ ಕೇಂದ್ರಗಳು ಮುಚ್ಚಿದ್ದವು, ಸರ್ಕಾರಿ ಕಚೇರಿಗಳು ತೆರೆದಿದ್ದವು ವಾಹನ ಸಂಚಾರ ಮಾಮೂಲಾಗಿತ್ತು. ಬಂದ್ ಬೆಂಬಲಿಸಿ ನೂರಾರು ಮಂದಿ ಮೆರವಣಿಗೆ ನಡೆಸಿದರು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದಿಂದ ಜನವಾದಿ ಮಹಿಳಾ ಸಂಘಟನೆ, ಕಾಂಗ್ರೆಸ್, ಸಿಐಟಿಯು, ಪ್ರಾಂತ ರೈತ ಸಂಘ, ರಾಜ್ಯ ರೈತ ಸಂಘ, ಬಹುಜನ ಸಮಾಜ ಪಕ್ಷ, ಡಿವೈಎಫ್ ಐ, ಡಿಎಸ್‌ಎಸ್ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತಾ ಅನಂತ್ ರಾಂ ಸರ್ಕಲ್ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ದೇವಿ ಮಾತನಾಡಿ, ರೈತ ಪರವಾಗಿದ್ದ ಮೂರು ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದು ರೈತ ಕುಲವನ್ನು ನಾಶ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಅಧಿಕಾರಕ್ಕೆ ಬಂದ ದಿನದಿಂದಲೂ ದಿನಿತ್ಯದ ಅಗತ್ಯ ವಸ್ತುಗಳಾದ ಗ್ಯಾಸ್, ಪೆಟ್ರೋಲ್ ಡೀಸಲ್ ಅಡುಗೆ ಎಣ್ಣೆ, ಬೇಳೆಕಾಳುಗಳ ಬೆಲೆಗಳನ್ನು ದಿನದಿಂದ ದಿನಕ್ಕೆ ಏರಿಕೆ ಮಾಡುತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು.
ಸಿಐಟಿಯುನ ರಾಜ್ಯ ಮುಖಂಡ ಜಿ.ರಾಮಕೃಷ್ಣ ಮಾತನಾಡಿ, ಕಳೆದ ಹತ್ತು ತಿಂಗಳಿನಿAದ ದೆಹಲಿಯಲ್ಲಿ ರೈತರು ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ರೈತರ ಸಮಸ್ಯೆಯನ್ನು ಬಗೆಹರಿಸುತ್ತಿಲ್ಲ. ರೈತ ಬೆಳೆದಂತಹ ಬೆಳೆಗಳಿಗೆ ಕನಿಷ್ಠ ಒಂದು ಬೆಲೆಯನ್ನು ನಿಗದಿ ಮಾಡಿ ಕಾನೂನಾತ್ಮಕ ವಾಗಿ ಬೆಲೆ ಘೋಷಣೆ ಮಾಡಿ ಎಂದು ಹೇಳಿ ಹೋರಾಟ ಮಾಡಿದರೂ ಕೂಡ ಇಲ್ಲಿಯವರೆಗೆ ಪ್ರಧಾನಿ ನರೇಂದ್ರ ಮೋದಿ ರೈತರನ್ನು ಕರೆದು ಮಾತುಕತೆ ನಡೆಸದಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮುಖಂಡರಾದ ತಿಮ್ಮೇಗೌಡ, ಸುಶೀಲಾ, ಸುನೀತಾ, ಮಂಟೇಸ್ವಾಮಿ, ಗೌರಮ್ಮ, ಟಿ.ಎಚ್.ಆನಂದ್, ಶಿವಮಲ್ಲಯ್ಯ, ಲಿಂಗರಾಜುಮೂರ್ತಿ, ಬಿಎಸ್ಪಿಯ ಉಮೇಶ್, ಡಿಎಸ್‌ಎಸ್ ಕೃಷ್ಣ, ರೈತ ಶಿವಕುಮಾರ್, ದೇವಿಪುರ ಮಹೇಶ್, ಡಿವೈಎಸ್‌ನ ಶಿವಕುಮಾರ್ ಸೇರಿದಂತೆ ಹಲವರು ಇದ್ದರು.
ಭಾರತ್ ಬಂದ್ ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಟಿಎಪಿಸಿಎಂಎಸ್ ನಿರ್ದೇಶಕ ಲಿಂಗರಾಜು, ಪುರಸಭೆ ಸದಸ್ಯ ರಾಜಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಜೆ.ದೇವರಾಜು, ಎಸ್.ಪಿ.ಸುಂದರ್ ರಾಜು, ಮುಖಂಡರಾದ ಪುಟ್ಟಸ್ವಾಮಿ, ಜಯರಾಜು, ಕಿರಣ್ ಕುಮಾರ್, ಶಾಂತರಾಜು, ಚನ್ನಿಂಗರಾಮು, ದೀಲಿಪ್ ಕುಮಾರ್, ಚಿನ್ನಸ್ವಾಮಿ, ಸೇರಿದಂತೆ ಹಲವರು ಇದ್ದರು.

ವರದಿ ; ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ,

error: