ಕಾರವಾರ: ಜಿಲ್ಲೆಯಲ್ಲಿ ತುರ್ತು ಆಹಾರದ ಅಗತ್ಯವಿದ್ದವರಿಗೆ ಜಿಲ್ಲಾಡಳಿತದಿಂದ ಅಂಗನವಾಡಿಗಳಲ್ಲಿ ಆಹಾರ ತಯಾರಿಸಿ ಆಹಾರವನ್ನ ವಿತರಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಕೆ. ತಿಳಿಸಿದ್ದಾರೆ
ತುರ್ತು ಆಹಾರದ ಅಗತ್ಯವಿದ್ದಂತಹ ಸಾರ್ವಜನಿಕರು ತಮ್ಮ ಹೆಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ನಿರ್ದೇಶಕರಾದ ಡಾ. ರಾಜೇಂದ್ರ ಬೇಕಲ್ (ಮೊಬೈಲ್ ಸಂಖ್ಯೆ: 9880301250) ಅವರನ್ನು ಸಂಪರ್ಕಿಸುವ ಮೂಲಕ ತಮ್ಮ ಹೆಸರನ್ನು ನೊಂದಾಯಿಸಬೇಕಾಗಿರುತ್ತದೆ.
ಹೆಸರು ನೋಂದಣಿ ಮಾಡಿಸಿಕೊಂಡವರಿಗೆ ಸಮೀಪದ ಅಂಗನವಾಡಿಗಳ ಮೂಲಕ ಆಹಾರ ಒದಗಿಸಲಾಗುವುದು. ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಕೆ. ವಿನಂತಿಸಿದ್ದಾರೆ
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ