March 15, 2025

Bhavana Tv

Its Your Channel

ಅಧಿಕಾರವಿಲ್ಲದೇ ಕಂಗೆಟ್ಟು ಚಡಪಡಿಸುತ್ತಿರುವ ಕಾಂಗ್ರೆಸ್ ಪಕ್ಷ ಬಿಜೆಪಿ ಸರಕಾರದ ಬಗ್ಗೆ ನಿರಂತರ ಅಪಪ್ರಚಾರ ಮಾಡುತ್ತಿದೆ ಜಿಲ್ಲಾ ಸಹ ವಕ್ತಾರ ಸದಾನಂದ ಭಟ್ ಆರೋಪ

ಭಟ್ಕಳ: ಅಧಿಕಾರವಿಲ್ಲದೇ ಕಂಗೆಟ್ಟು ಚಡಪಡಿಸುತ್ತಿರುವ ಕಾಂಗ್ರೆಸ್ ಪಕ್ಷ ಬಿಜೆಪಿ ಸರಕಾರದ ಬಗ್ಗೆ ನಿರಂತರ ಅಪಪ್ರಚಾರ ಮಾಡುತ್ತಿರುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿದೆ ಎಂದು ಬಿಜೆಪಿಯ ಜಿಲ್ಲಾ ಸಹ ವಕ್ತಾರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಸಂಚಾಲಕ ಸದಾನಂದ ಭಟ್ ಹೇಳಿದರು.

ಭಟ್ಕಳ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಅಭಿವೃದ್ಧಿಪರ ಚಿಂತನೆ ಇಲ್ಲ. ಅಧಿಕಾರವಿಲ್ಲದೇ ಕಾಂಗ್ರೆಸ್ ಕಳೆಗುಂದಿದ್ದು, ರಾಜಕೀಯ ದುರುದ್ಧೇಶದಿಂದಲೇ ಅಭಿವೃದ್ಧಿಗೆ ಹಿನ್ನಡೆ ಮಾಡುತ್ತಿದೆ. ಲೋಕಸಭೆ ಮತ್ತು ವಿಧಾನ ಸಭೆಯಲ್ಲಿ ಸರಿಯಾದ ಚರ್ಚೆ ನಡೆಸದೇ ಸಸೂತ್ರ ಸದನ ನಡೆಸಲು ಅವಕಾಶ ಆಗದಂತೆ ಗಲಾಟೆ ಮಾಡುತ್ತಿದೆ. ವಿಧಾನಸಭೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಷಣದ ಕಾರ್ಯಕ್ರಮಕ್ಕೂ ಬಹಿಷ್ಕಾರ ಹಾಕಿದೆ. ಬಿಜೆಪಿ ಸರಕಾರದ ಬಗ್ಗೆ ಅನಾವಶ್ಯಕವಾಗಿ ಗೊಂದಲ ಸೃಷ್ಟಿ ಮಾಡುವುದು, ಅಪಪ್ರಚಾರ ಮಾಡುವುದರಲ್ಲಿ ನಿರತರಾಗಿರುವ ಕಾಂಗ್ರೆಸ್ ಮುಖಂಡರು ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ನಿರಂತರವಾಗಿ ಅಭಿವೃದ್ಧಿಗೆ ಅಡ್ಡಗಾಲು ಹಾಕುವುದು ಸರಿಯಲ್ಲ ಎಂದರು.
ಕಾAಗ್ರೆಸ್ ಪಕ್ಷದ ಕಾರ್ಯಕರ್ತರಿಗೇ ಹೂ ಮಾಲೆ ಹಾಕಿ ಬಿಜೆಪಿಯಿಂದ ತಮ್ಮ ಪಕ್ಷಕ್ಕೆ ಬಂದಿದ್ದಾರೆAದು ಮುಜುಗರ ಸೃಷ್ಟಿಸುವ ಕಾರ್ಯ ಮಾಡುತ್ತಿರುವುದು ಹಾಸ್ಯಾಸ್ಪದ. ಇನ್ನಾದರೂ ಕಾಂಗ್ರೆಸ್ ಮುಖಂಡರು ವಿನಾಕಾರಣ ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ ಅಭಿವೃದ್ಧಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಯುಪಿಎ ಸರಕಾರದ ತೈಲಬಾಂಡ್‌ನಿAದ ಪೆಟ್ರೋಲಿಯಮ್ ಉತ್ಪನ್ನಗಳ ಬೆಲೆ ಜಾಸ್ತಿಯಾಗಲು ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ಇದನ್ನು ಸರಪಡಿಸಲಿದೆ. ಕೇಂದ್ರ ಸರಕಾರದ ಉತ್ತಮ ಯೋಜನೆಗಳ ಕುರಿತು ಪ್ರಧಾನಮಂತ್ರಿಗೆ ಜನಸಾಮಾನ್ಯರು ಪೋಸ್ಟ ಕಾರ್ಡ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದು, ಜಿಲ್ಲೆಯಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್ ಲಸಿಕೆ ವಿತರಿಸಲಾಗುತ್ತಿದೆ. ನರೇಂದ್ರ ಮೋದಿಯವರು ಪ್ರಧಾನಿ ಆದ ಮೇಲೆ ದೇಶದಲ್ಲಿ ಅಭಿವೃದ್ಧಿ ವೇಗ ಹೆಚ್ಚಿದೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಸುಬ್ರಾಯ ದೇವಾಡಿಗ ಮಾತನಾಡಿ, ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಅ. ೭ರ ವರೆಗೂ ಸೇವೆ ಮತ್ತು ಸಮರ್ಪಣೆ ಹೆಸರಿನಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಭಟ್ಕಳ ಮಂಡಲದ ಮತ್ತು ವಿವಿಧ ಮೋರ್ಚಾಗಳ ವತಿಯಿಂದ ನಡೆಸಿದ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದ ಅವರು ಬಿಜೆಪಿ ಪಕ್ಷ ಚುನಾವಣೆ ಬಂದಾಗ ಮಾತ್ರ ಸಾಮಾಜಿಕ ಕಾರ್ಯಕ್ರಮ ರೂಪಿಸುವ ಪಕ್ಷವಲ್ಲ. ಬದಲಾಗಿ ನಿರಂತರವಾಗಿ ಬೂತ್ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಪಕ್ಷವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರವಿ ನಾಯ್ಕ ಜಾಲಿ, ಜಿಲ್ಲಾ ಕಾನೂನು ಪ್ರಕೋಷ್ಟದ ಸಂಚಾಲಕ ಸುರೇಶ ನಾಯ್ಕ, ಸಹ ಸಂಚಾಲಕ ಯೋಗೇಶ ಭಟ್, ಪಿ.ವಿ. ಹೆಗಡೆ, ಮಂಡಲ ಪ್ರಧಾನ ಕಾರ್ಯದರ್ಶಿ ಮೋಹನ ನಾಯ್ಕ, ಶ್ರೀಕಾಂತ ನಾಯ್ಕ, ಸಚಿನ ಮಹಾಲೆ, ಪಾಂಡುರAಗ ನಾಯ್ಕ ಮುಂತಾದವರಿದ್ದರು.

error: