December 22, 2024

Bhavana Tv

Its Your Channel

೨೫ ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಕರೋನಾ ಆತಂಕ

ಮoಡ್ಯ:ಸರ್ಕಾರಿ ಕಾಲೇಜೊಂದರ ೨೫ ಕ್ಕೂ ಹೆಚ್ಚು ವಿದ್ಯಾರ್ಥಿನಿಯರಲ್ಲಿ ಮಾರಕ ಕೊರೋನಾ ರೋಗ ಪತ್ತೆಯಾಗುವ ಮೂಲಕ ಆತಂಕ ಮೂಡಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಮAಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟ್ಯಾಂಕ್ ಮೈದಾನದಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ೨೭ ವಿದ್ಯಾರ್ಥಿನಿಯರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.ಬಿಂಡಿಗನವಿಲೆ ವಾಸಿಯಾಗಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ವ್ಯಾಸಂಗ ಮಾಡುತಿದ್ದ ಕಾಲೇಜಿನ ಎಲ್ಲಾ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿದಾಗ ಬಹುತೇಕ ವಿದ್ಯಾರ್ಥಿನಿಯರಲ್ಲಿ ಕೊರೊನಾ ಪತ್ತೆಯಾಗಿದೆ. ೨೬ ಪತ್ತೆಯಾಗಿರುವ ವಿದ್ಯಾರ್ಥಿನಿಯರು ನಾಗಮಂಗಲ ಪಟ್ಟಣವೂ ಸೇರಿದಂತೆ ತಾಲೂಕಿನ ಕರಡಹಳ್ಳಿ, ಗಂಗವಾಡಿ, ಗುಲಕಾಯಿಹೊಸಹಳ್ಳಿ, ಯಗಟಹಳ್ಳಿ, ಬೊಮ್ಮನಾಯಕನಹಳ್ಳಿ, ಬೋಗಾದಿ ಹಾಗೂ ಕನ್ನಗೋನಹಳ್ಳಿ ಮತ್ತು ಮತ್ತಿತರ ಗ್ರಾಮಗಳ ವಾಸಿಗಳಾಗಿದ್ದಾರೆ.ಈ ಎಲ್ಲಾ ಸೋಂಕಿತ ವಿದ್ಯಾರ್ಥಿನಿಯನ್ನು ಕರೆತಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕೊರೊನಾ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಸಿಬ್ಬಂದಿಯೊAದಿಗೆ ಕಾಲೇಜಿಗೆ ಆಗಮಿಸಿದ ಟಿಹೆಚ್‌ಒ ಡಾ.ಪ್ರಸನ್ನ ಭೋದಕ ವರ್ಗ ಹಾಗೂ ಕಾಲೇಜಿನ ಸಿಬ್ಬಂದಿ ಸೇರಿದಂತೆ ಎಲ್ಲಾ ವಿದ್ಯಾರ್ಥಿನಿಯರನ್ನು ಕರೋನಾ ತಪಾಸಣೆ ನಡೆಸಿದ್ದಾರೆ.ಅಲ್ದೆ ಕಾಲೇಜಿನ ಕಟ್ಟಡವನ್ನು ಸ್ಯಾನಿಟೇಸ್ ಮಾಡಿ ಶುದ್ದೀಕರಣ ಮಾಡುವಂತೆ ಹಾಗೂ ಒಂದು ವಾರ ಕಾಲೇಜಿಗೆ ರಜೆ ನೀಡುವಂತೆ ಕಾಲೇಜಿನ ಪ್ರಾಂಶುಪಾಲರಿಗೆ ತಹಸೀಲ್ದಾರ್ ಕುಂ.ಇ. ಅಹಮ್ಮದ್ ಆದೇಶ ನೀಡಿದ್ದು,ಸೋಂಕಿತ ವಿದ್ಯಾರ್ಥಿನಿಯ ಪ್ರಾಥಮಿಕ ಸಂಪರ್ಕಿತರು ಸೇರಿ ಆ ವಿದ್ಯಾರ್ಥಿನಿಯ ಕುಟುಂಬದವನ್ನು ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದ್ದಾರೆ.

ವರದಿ: ಚಂದ್ರಮೌಳಿ ನಾಗಮಂಗಲ

error: