ವರದಿ: ವೇಣುಗೋಪಾಲ ಮದ್ಗುಣಿ
ಶಿರಸಿ : ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರಿಗೆ ತರಬೇತಿ ನೀಡಿದ ಕಾಶಿನಾಥ ನಾಯ್ಕ ಅವರನ್ನು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ಬನವಾಸಿಯಲ್ಲಿ ಭೇಟಿಯಾದರು. ಸಚಿವರಾದ ಶಿವರಾಮ ಹೆಬ್ಬಾರ ಅವರು ಕ್ರೀಡಾ ತರಬೇತುದಾರ ಕಾಶೀನಾಥ್ ನಾಯ್ಕ ಬೆಂಗಳೆ ಅವರನ್ನು ಸನ್ಮಾನಿಸಿ ಗೌರವಿಸಿದರು ಹಾಗೂ ಅವರ ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬನವಾಸಿ ಗ್ರಾಮ ಪಂಚಾಯತದ ಪ್ರಮುಖರು, ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರದ ಅಧ್ಯಕ್ಷರು,ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
More Stories
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ
ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು, ಕಾಗೇರಿ ಮೇಲೆ ಯಾಕಾಗಿಲ್ಲ? ಡಾ.ಅಂಜಲಿ ಪ್ರಶ್ನೆ