April 30, 2024

Bhavana Tv

Its Your Channel

ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ನಿಂದ ಗಾಂಧೀ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಸಾಮರಸ್ಯ ನಡಿಗೆ

ಕಾರ್ಕಳ: ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ಕ್ರಾಂತಿ ಮಹಾತ್ಮಾ ಗಾಂಧೀಜಿಯವರು ಬ್ರಿಟಿಷರ ವಿರುದ್ಧ ನಡೆಸಿದ ಅಹಿಂಸಾತ್ಮಕ ಹೋರಾಟದ ಗುರಿಯಾಗಿತ್ತು. ಆ ಹೋರಾಟದ ಫಲಾನುಭವಿಗಳಾಗಿದ್ದುಕೊಂಡು ಅಂತಹ ಮಹಾತ್ಮನನ್ನೆ ಕೊಂದ ಕೃತಘ್ನ ಮನಸ್ಥಿತಿ ಮತ್ತೆ ಚಿಗುರೊಡೆಯದಂತೆ ನೋಡಿ ಕೊಳ್ಳುವುದು ಕಾಂಗ್ರೆಸ್ ಪಕ್ಷದ ಕರ್ತವ್ಯವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಹೇಳಿದ್ದಾರೆ.
ಅವರು ಕಾರ್ಕಳ ಗಾಂಧೀ ಮೈದಾನದಲ್ಲಿ ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಗಾಂಧೀ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಸಾಮರಸ್ಯ ನಡಿಗೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಹಿಳಾ ಕಾಂಗ್ರಸ್ ಅಧ್ಯಕ್ಷೆ ಅನಿತಾ ಡಿ’ಸೋಜ ಪ್ರಸ್ತಾವನೆ ಗೈದು ಗಾಂದೀಜಿಯ ವಿಶ್ವ ಕುಟುಂಬದ ಚಿಂತನೆಯನ್ನು ಅನುಷ್ಠಾನಕ್ಕೆ ತರುವುದು ಇಂದಿನ ಆಧ್ಯತೆಯಾಗಿದೆ ಎಂದರು. ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದಾರಾವ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
ಬಳಿಕ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದ ಸಮಾರೋಪ ಸಭೆಯಲ್ಲಿ ಸಾಮಾಜಿಕ ಚಿಂತಕ ಪತ್ರಕರ್ತ ಹರ್ಷಕುಮಾರ್ ಕುಗ್ವೆ ಹಾಗೂ ಇತರರು ಗಾಂದೀಜಿಯ ಸಾಧನೆಯ ಇತಿಚಿತ್ರ ಗತಿಚಿತ್ರವನ್ನು ಸಭೆಯ ಮುಂದಿಟ್ಟು ಮಾತಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಡಿಸಿಸಿ ಉಪಾಧ್ಯಕ್ಷರಾದ ಸುಧಾಕರ. ಕೊಟ್ಯಾನ್,ನೀರೆ ಕೃಷ್ಣ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಕೆಪಿಸಿಸಿ ಕೃಷಿ ಘಟಕ ಕಾರ್ಯದರ್ಶಿ ಉದಯ ವಿ. ಶೆಟ್ಟಿ, ಡಿಸಿಸಿ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಮಾಲಿನಿ ರೈ, ಎಪಿಎಂಸಿ ಸದಸ್ಯ ಜಯರಾಮ ಆಚಾರ್ಯ, ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಹಾಗೂ ಗ್ರಾಮ ಸಮಿತಿಗಳ ಅದ್ಯಕ್ಷರು ಸದಸ್ಯರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: