December 22, 2024

Bhavana Tv

Its Your Channel

ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಶಿವಪುರ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ತಿರುಗಾಡುವ ದಾರಿಗೆ ಅಡ್ಡಲಾಗಿ ತಂತಿಬೇಲಿ ನಿರ್ಮಿಸಿದ್ದಾರೆ ಎಂದು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಸಮಸ್ಯೆ ಬಗೆಹರಿಸದ ಕಾರಣ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರವನ್ನು ಇಟ್ಟು ಪ್ರತಿಭಟನೆ ನಡೆಸಿದರು.
ನಂತರ ಶಿವಪುರ ಗ್ರಾಮದ ರೈತ ಮೋರ್ಚಾ ಅಧ್ಯಕ್ಷರಾದ ಸಿದ್ದಪ್ಪ ಮಾತನಾಡಿ ನಾವು ಸಂವಿಧಾನದ ಚೌಕಟ್ಟಿನಲ್ಲಿ ಹೋರಾಟವನ್ನು ಮಾಡುತ್ತೇವೆ ಸಂವಿಧಾನ ನಮಗೆ ಕೊಟ್ಟಿರುವ ಹಕ್ಕುಗಳನ್ನು ಯಾರು ಕಸಿಯಲು ಸಾಧ್ಯವಿಲ್ಲ . ಹಾಗಾಗಿ ಗ್ರಾಮ ಪಂಚಾಯಿತಿಯ ಆಡಳಿತದ ವಿರುದ್ಧ ನ್ಯಾಯ ಸಿಗುವವರೆಗೂ ನಮ್ಮ ಹೋರಾಟವನ್ನು ಕೈಬಿಡುವುದಿಲ್ಲ ಎಂದು ಈ ಮೂಲಕ ಗ್ರಾಮಪಂಚಾಯತಿಯ ಆಡಳಿತ ವರ್ಗದವರಿಗೆ ಎಚ್ಚರಿಕೆ ನೀಡಿದ್ದಾರೆ . ಈ ಸಂದರ್ಭದಲ್ಲಿ ಬಿಜೆಪಿಯ ಯುವ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.

ವರದಿ ಸದಾನ೦ದಾ ಕನ್ನೆಗಾಲ ಗುಂಡ್ಲುಪೇಟೆ

error: