
ಭಟ್ಕಳ: ಇತಿಹಾಸದಲ್ಲಿ ಆದ ಸೋಲನ್ನು ಅನುಭವಿಸಿ ಅಥವಾ ಓದಿ ಅದನ್ನು ತಿದ್ದಿಕೊಳ್ಳದೆ ಹೋದರೆ ಅದು ನಮ್ಮ ವೈಫಲ್ಯವಾಗುತ್ತದೆ ಎಂದು ಅಂಜುಮಾನ್ ಇಂಜಿನೀಯರಿAಗ್ ಕಾಲೇಜಿನ ಉಪನ್ಯಾಸಕ ಪ್ರಸಾದ್ ಜಿ.ಬಿ. ಹೇಳಿದರು.
ಅವರು ಭಟ್ಕಳದ ದಿ ನ್ಯೂ ಇಂಗ್ಲಿಷ್ ಪಿ ಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸುವ ‘ಸಮಾಗಮ-೨೦೨೧’ ಎಂಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ, ಹಿಂದಿನ ತರಗತಿಗಳಲ್ಲಿ ನಿಮ್ಮ ತಪ್ಪಿನಿಂದ ಒಂದು ವೇಳೆ ಕಡಿಮೆ ಅಂಕಗಳನ್ನು ತೆಗೆದುಕೊಂಡಿದ್ದರೆ ಈಗ ಪಿಯುಸಿ ಓದುವಾಗ ಈ ಹಿಂದೆ ಆದ ತಪ್ಪನ್ನು ತಿದ್ದಿಕೊಂಡು ಹೆಚ್ಚಿನ ಅಂಕ ಪಡೆದು ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಹೇಳಿದರು.
ಭಟ್ಕಳ ಏಜುಕೇಶನ್ ಟ್ರಸ್ಟಿನ ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ್ ಎಸ್.ಎಸ್.ಎಲ್.ಸಿ. ಯಲ್ಲಿ ೯೦% ಕ್ಕಿಂತ ಹೆಚ್ಚು ಅಂಕ ಪಡೆದು ದಿ ನ್ಯೂ ಇಂಗ್ಲಿಷ್ ಪಿ ಯು ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.
ಭಟ್ಕಳ ಏಜುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಾ. ವಿರೇಂದ್ರ ವಿ. ಶಾನಭಾಗ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪ್ರಿಯಾಂಕ ಮತ್ತು ಸಂಗಡಿಗರು ಪ್ರಾರ್ಥಿಸಿದರು, ಸಹನಾ ಪೈ ಸ್ವಾಗತಿಸಿದರು, ಚಂದನ ನಾಯ್ಕ ವಂದಿಸಿದರು, ಸಂಧ್ಯಾ ಬೈಂದೂರು ಮತ್ತು ಪ್ರಜ್ಞಾ ಗೋಳಿ ನಿರೂಪಿಸಿದರು. ನಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ನಡೆಯಿತು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ