
ಭಟ್ಕಳ ತಾಲೂಕಿನ ಮಾವಿನಕುರ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬುಧವಾರ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಮಾಜಿ ಶಾಸಕರಾದ ಮಂಕಾಳ್ ವೈದ್ಯ ರವರು ಉದ್ಘಾಟನೆ ಮಾಡಿದರು.
ಈ ಸಂಧರ್ಭದಲ್ಲಿ ಅವರು ಮಾತನಾಡಿ ಈ ದೇಶದಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿ ಹಾಗೂ ಸಾಮಾನ್ಯ ಪ್ರಜೆಗಳಿಗೆ ಅಧಿಕಾರ ಸಿಗಬೇಕು ಎಂದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಅದು ಸುಳ್ಳು ಹೇಳಿ ಜಾತಿ ಧರ್ಮದ ಹೆಸರಲ್ಲಿ ಅಧಿಕಾರಕ್ಕೆ ಬರುವ ಬಿ ಜೆ ಪಿ ಪಕ್ಷದಿಂದ ಸಾಧ್ಯವಿಲ್ಲ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ವಿವಿಧ ವಿಭಾಗದ ಅಧ್ಯಕ್ಷರಾದ ನಾರಾಯಣ ಜೆ ನಾಯ್ಕ್, ವಿಷ್ಣು ದೇವಾಡಿಗ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಯನಾ ನಾಯ್ಕ್, ಕಾಂಗ್ರೆಸ್ ಮುಖಂಡರಾದ ದೇವಿದಾಸ್ ಆಚಾರಿ ಯುವ ಕಾಂಗ್ರೆಸ್ ಅಧ್ಯಕ್ಷ ದಯಾನಂದ ನಾಯ್ಕ್ ಪಂಚಾಯತ್ ಸದಸ್ಯರು, ಮಾವಿನ ಕುರ್ವಾ ಗ್ರಾಮ ಪಂಚಾಯತ್ ಸಮಿತಿ ಯ ಅಧ್ಯಕ್ಷರಾದ ಆನಂದ ನಾಯ್ಕ್, ರವೀಂದ್ರ ನಾಯ್ಕ್, ದೊಡ್ಡಯ್ಯ ದೇವಾಡಿಗ, ಗಂಗಾಧರ್ ದೇವಾಡಿಗ, ಗಣಪತಿ ನಾಯ್ಕ್, ಮೋಹನ್ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.
More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ