December 19, 2024

Bhavana Tv

Its Your Channel

ಕಾಂಗ್ರೆಸ್ ಟಾಸ್ಕ್ ಫೋರ್ಸ್ ಜಿಲ್ಲಾ ಅಧ್ಯಕ್ಷರಾಗಿ ಸತೀಶ್ ಸೈಲ್

ಕಾರವಾರ: ಕೊರೋನಾ ನಿಯಂತ್ರಣಕ್ಕಾಗಿ ಹಾಗೂ ಜನರ ಹಿತರಕ್ಷಣೆ ಕಾಪಾಡುವ ಉದ್ದೇಶದಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆಯನ್ನ ರಚಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಅಧ್ಯಕ್ಷರನ್ನ ಡಿ.ಕೆ ಶಿವಕುಮಾರ್ ಆಯ್ಕೆ ಮಾಡಿದ್ದು ಪಕ್ಷದ ಜಿಲ್ಲಾ ಅಧ್ಯಕ್ಷರ ಜೊತೆ ಕಾರ್ಯಕರ್ತರು ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಲು ಸೂಚನೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಮಾಜಿ ಶಾಸಕ ಸತೀಶ್ ಸೈಲ್ ರವರನ್ನ ನೇಮಕ ಮಾಡಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಹಾಗೂ ಜನರಿಗೆ ಆಗುವ ಸಮಸ್ಯೆಗಳನ್ನ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷ ತನ್ನ ಕಾರ್ಯಕರ್ತರನ್ನ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪಡೆ ರಚಿಸಿದೆ.

ಇನ್ನು ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಂಡ ಸತೀಶ್ ಸೈಲ್ ಪ್ರತಿಕ್ರಿಯೆ ನೀಡಿದ್ದು ಕೊರೋನಾದಂತಹ ತುರ್ತು ಪರಿಸ್ಥಿತಿಯಲ್ಲಿ ಜನರ ಸೇವೆ ಮಾಡಬೇಕಾಗಿದೆ. ಮಾಜಿ ಸಚಿವ ದೇಶಪಾಂಡೆಯವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

source : nudijenu

error: