April 30, 2024

Bhavana Tv

Its Your Channel

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ವತಿಯಿಂದ ಪ್ರತಿಭಟನೆ

ಬಾಗೇಪಲ್ಲಿ:- ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್- ಡೀಸೆಲ್ ಅಡಿಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್ ವಾದಿ) ಬಾಗೇಪಲ್ಲಿ ತಾಲೂಕು ಸಮಿತಿ ನೇತೃತ್ವದಲ್ಲಿ ಪಟ್ಟಣದ ತಹಶಿಲ್ದಾರ್ ಕಚೇರಿ ಎದುರು ಸಿಪಿಐಎಂ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.

ಎಡಪಂಥೀಯ ಚಿಂತಕ ಹಾಗೂ ಜನಪ್ರಿಯ ವೈದ್ಯ ಡಾ.ಅನಿಲ್ ಕುಮಾರ್ ಅವುಲಪ್ಪ ಮಾತನಾಡಿ
ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳಿಂದ ಅಗತ್ಯ ವಸ್ತುಗಳಾದ ಅಡುಗೆ ಅನಿಲ, ಪೆಟ್ರೋಲ್, ಅಡುಗೆ ಎಣ್ಣೆ ಹಾಗೂ ಇತರೆ ದಿನಸಿ ಪದಾರ್ಥಗಳ ಬೆಲೆ ಏರಿಕೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಅವಶ್ಯಕ ವಸ್ತುಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಬೆಲೆ ನಿಯಂತ್ರಣದ ಮೇಲಿದ್ದ ಸರ್ಕಾರ ಪಾತ್ರವನ್ನು ಕಿತ್ತು ಹಾಕಿ ಕಾರ್ಪೋರೇಟ್ ಪರ ನಿಂತಿದೆ. ಕೂಡಲೇ ಬೆಲೆ ಇಳಿಕೆ ಮಾಡಿ ಅಡುಗೆ ಅನಿಲ ಸಬ್ಸಿಡಿ ಮುಂದುವರೆಸಬೇಕು ಎಂದು ಒತ್ತಾಯಿಸಿದರು

ಬಾಗೇಪಲ್ಲಿ ತಾಲ್ಲೂಕು ಸಿಪಿಐಎಂ ತಾಲ್ಲೂಕು ಘಟಕ ಕಾರ್ಯದರ್ಶಿ ಮಹಮ್ಮದ್ ಅಕ್ರಂ ಮಾತನಾಡಿ
ಕೋವಿಡ್ ಲಾಕ್‌ಡೌನ್‌ನಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು ಇದುವರೆಗೆ ಚೇತರಿಕೆ ಕಂಡಿಲ್ಲ. ಅನೇಕರು ಕೆಲಸ ಕಳೆದುಕೊಂಡು ಜೀವನ ನಿರ್ವಹಣೆಗೆ ಸಾಲ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಜನರಿಗೆ ಆಸರೆಯಾಗಬೇಕಿದ್ದ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ನಿರತರವಾಗಿ ಅಗತ್ಯ ವಸ್ತುಗಳ, ಆಹಾರ ಪದಾರ್ಥಗಳ ಬೆಲೆ ಏರಿಕೆ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಏರಿಕೆ ಮಾಡಿ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಬೆಲೆಏರಿಕೆ ತಡೆಗಟ್ಟಿ ಸಾರ್ವಜನಿಕರಿಗೆ ಪಡಿತರ ವ್ಯವಸ್ಥೆಯ ಮೂಲಕ ತೆರಿಗೆಯೇತರ ಎಲ್ಲಾ ಕುಟುಂಗಳಿಗೆ ೩೫ ಕೆ.ಜಿ. ಆಹಾರ ಧಾನ್ಯ ಮತ್ತು ಅಗತ್ಯ ಬೇಳೆ ಕಾಳುಗಳು, ಸಕ್ಕರೆ, ಅಡುಗೆ ಎಣ್ಣೆಯನ್ನು ವಿತರಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಂ.ಪಿ.ಮುನಿವೆAಕಟಪ್ಪ, ಮಂಜುನಾಥ ರೆಡ್ಡಿ, ಜನವಾದಿ ಮಹಿಳಾ ಅದ್ಯಕ್ಷೆ ಬಿ. ಸಾವಿತ್ರಮ್ಮ, ರಘುನಾಥ ರೆಡ್ಡಿ ಶ್ರೀರಾಮಪ್ಪ, ಅಶ್ವಥಪ್ಪ, ಕೃಷ್ಣಪ್ಪ,ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು

ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ

error: