ಮಳವಳ್ಳಿ : ಕೇಂದ್ರ ಸರ್ಕಾರದ ಬೆಲೆ ಏರಿಕೆ ಕ್ರಮವನ್ನು ಖಂಡಿಸಿ ಮಳವಳ್ಳಿ ಪಟ್ಟಣದಲ್ಲಿ ಜನವಾದಿ ಮಹಿಳಾ ಸಂಘಟ ನೆಯ ಕಾರ್ಯಕರ್ತೆ ಯರು ಪ್ರತಿಭಟನೆ ನಡೆಸಿದರು.
ಇಲ್ಲಿನ ಪೇಟೆ ವೃತ್ತದ ಬಳಿ ನೆರೆದ ಪ್ರತಿಭಟನಾಕಾರರು ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿಸಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷೆ ದೇವಿ, ತಾಲ್ಲೂಕು ಅಧ್ಯಕ್ಷೆ ಸುಶೀಲಾ, ಸುನೀತಾ, ರವರುಗಳು ಚುನಾವಣಾ ಪೂರ್ವದಲ್ಲಿ ಆಶ್ವಾಸನೆಗಳ ಸುರಿಮಳೆ ಸುರಿಸಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಅಗತ್ಯ ಬೆಲೆಯನ್ನು ಗಗನಕ್ಕೆ ಏರಿಸಿ ಜನಸಾಮಾನ್ಯರ ಬದುಕನ್ನು ನರಕ ಮಾಡಿದ್ದಾರೆ ಎಂದು ಕಿಡಿ ಕಾರಿದರು.
ಕೋವಿಡ್ ಹಾವಳಿಯಿಂದ ಲಾಕ್ ಡೌನ್ ನಿಂದ ಜನ ಸಾಮಾನ್ಯರು ತತ್ತರಿಸಿರುವಾಗಲೇ ಬೆಲೆ ಏರಿಕೆ ಮೂಲಕ ಜನ ಸಾಮಾನ್ಯರನ್ನು ಸುಲಿಗೆ ಮಾಡಿ ದೊಡ್ಡ ದೊಡ್ಡ ಕಂಪನಿಗಳಿಗೆ ಲಾಭ ಮಾಡಿಕೊಡುವ ಮೂಲಕ ಇದೊಂದು ಕಂಪನಿ ಸರ್ಕಾರ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಮಂಜುಳಾ, ರತ್ನಮ್ಮ, ಜಯಶೀಲ ಜಯಲಕ್ಷ್ಮಿ, ಮತ್ತಿತರರು ಪಾಲ್ಗೊಂಡಿದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ