December 22, 2024

Bhavana Tv

Its Your Channel

ಕೃಷಿ ಕಾಯಿದೆ ವಾಪಸ್;ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಇನ್ನಿತರ ಪ್ರಗತಿಪರ ಸಂಘಟನೆಗಳ ಮುಖಂಡರಿOದ ವಿಜಯೋತ್ಸವ

ಮಳವಳ್ಳಿ ; ರೈತರ ಐತಿಹಾಸಿಕ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಕೃಷಿ ವಲಯಕ್ಕೆ ಮಾರಕವಾದ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಇನ್ನಿತರ ಪ್ರಗತಿಪರ ಸಂಘಟನೆಗಳ ಮುಖಂಡರು ಮಳವಳ್ಳಿ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿದರು.ಇಲ್ಲಿನ ಪೇಟೆ ವೃತ್ತದಲ್ಲಿ ನೆರೆದ ಮುಖಂಡರು ಪಟಾಕಿ ಸಿಡಿಸಿ ರೈತ ಪರ ಜೈಕಾರದ ಘೋಷಣೆಗಳನ್ನು ಕೂಗುವ ಮೂಲಕ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎನ್ ಎಲ್ ಭರತ್ ರಾಜ್ ದೇಶದ ಕೃಷಿಯನ್ನು ಕಾರ್ಪೋರೆಟ್ ಕಂಪನಿಗಳಿಗೆ ವಹಿಸಿಕೊಡುವ ನರೇಂದ್ರ ಮೋದಿಯವರ ಒಕ್ಕೂಟ ಸರಕಾರದ ದೇಶ ಹಾಗೂ ರೈತ ವಿರೋಧಿ ಕಾಯ್ದೆಗಳನ್ನು ಪ್ರತಿರೋಧಿಸಿ ದೇಶವ್ಯಾಪ್ತಿ ಯಾಗಿ ಕೋಟ್ಯಾಂತರ ಜನ ಮತ್ತು ಮುಖ್ಯವಾಗಿ ದೆಹಲಿ ಸುತ್ತಲಿನ ಐದು ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಿ ಲಕ್ಷಾಂತರ ಜನ ಕಳೆದ ೩೬೦ ದಿನಗಳಿಂದ ನಿರಂತರವಾಗಿ ನಡೆಸುತ್ತಿದ್ದ ಐತಿಹಾಸಿಕ ಮತ್ತು ಜಾಗತಿಕ ಗಮನ ಸೆಳೆದ ಸಮರ ಶೀಲ ಪ್ರತಿರೋಧಕ್ಕೆ ಮಣಿದ ಒಕ್ಕೂಟ ಸರಕಾರ, ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ಕಾಯ್ದೆಗಳನ್ನು ವಾಪಾಸು ಪಡೆದಿರುವುದಾಗಿ ಪ್ರಕಟಿಸಿದೆ. ಇದು ದೇಶದ ರೈತರು, ಕಾರ್ಮಿಕರು ಹಾಗೂ ನಾಗರೀಕರ ಸಮರ ಶೀಲ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಬಣ್ಣಿಸಿದರು.

ಇದರಿಂದ ದೇಶದ ಕೃಷಿಯನ್ನು ಹಾಗೂ ಸ್ವಾವಲಂಬನೆಯನ್ನು ಕಬಳಿಸುವ ಕಾರ್ಪೋರೇಟ್ ಕಂಪನಿಗಳ ಹುನ್ನಾರಕ್ಕೆ ತೀವ್ರ ಹಿನ್ನಡೆಯಾದಂತಾಗಿ ಎಂದ ಅವರು ಅದೇ ರೀತಿ, ಹೋರಾಟದಲ್ಲಿ ತೊಡಗಿದ್ದಾಗಲೇ ಸಾವಿರಾರು ರೈತರು ಹುತಾತ್ಮರಾಗಿದ್ದು ಅವರೆಲ್ಲರಿಗೂ ಕೆಂಪು ನಮನ ಸಲ್ಲಿಸುವುದಾಗಿ ತಿಳಿಸಿದರು.

ಆದರೇ, ಇದು, ನರೇಂದ್ರ ಮೋದಿಯವರ ಈ ಪ್ರಕಟಣೆ ಮಾತ್ರವಾಗಿದ್ದು ಸಂಸತ್ತಿನಲ್ಲಿ ಕ್ರಮವಹಿಸಿ ಖಾತರಿ ಪಡಿಸುವ ಮೂಲಕ ಮಾತ್ರವೇ ನಿಜವಾಗಲಿದೆ. ಆದ್ದರಿಂದ ನರೇಂದ್ರ ಮೋದಿಯವರು ಈ ಕುರಿತು ತ್ವರಿತ ಕ್ರಮ ವಹಿಸುವಬೇಕು ಜೊತೆಗೆ ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಸಹ ಜಾರಿಗೆ ತಂದಿರುವ ರೈತ ವಿರೋಧಿ, ವಿದ್ಯುತ್ ಕಾಯ್ದೆ, ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳನ್ನು ಸಹ ವಾಪಸ್ ಪಡೆಯ ಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ಲಿಂಗರಾಜಮೂರ್ತಿ, ಜನವಾದಿ ಮಹಿಳಾ ಸಂಘಟನೆಯ ಸುಶೀಲಾ, ಮಂಜುಳಾ, ಸುನೀತಾ, ದಲಿತ ಸಂಘರ್ಷ ಸಮಿತಿಯ ಯತೀಶ್, ಡಾ. ಪ್ರಸಾದ್, ಮುಖಂಡರಾದ ಚಿಕ್ಕಮೊಗಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: