ಕುಮಟಾ: ಸಂತೆ ಮಾರುಕಟ್ಟೆಯ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದ ಪುರಸಭೆಯ ಅಧಿಕಾರಿಗಳ ತಂಡ, ಪ್ಲಾಸ್ಟಿಕ್ ಚೀಲಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು, ಅಂಗಡಿ ಮಾಲಿಕರಿಗೆ ದಂಡ ವಿಧಿಸಿದ ಘಟನೆ ಬುಧವಾರದ ಸಂತೆಯಲ್ಲಿ ನಡೆದಿದೆ.
ಪ್ಲಾಸ್ಟಿಕ್ ಚೀಲಗಳ ನಿಷೇಧವಿದ್ದರೂ ವಾರದ ಸಂತೆಯಲ್ಲಿ ಹೇರಳವಾಗಿ ಪ್ಲಾಸ್ಟಿಕ್ ಚೀಲ ಸೇರಿದಂತೆ ಇನ್ನಿತರ ವಸ್ತುಗಳ ಮಾರಾಟವಾಗುತ್ತಿತ್ತು. ಈ ಕುರಿತಂತೆ ಮಾಹಿತಿ ಪಡೆದ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಮ್.ಕೆ ತಂಡ, ಸಂತೆ ಮಾರುಕಟ್ಟೆಯ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಚೀಲಗಳು ಸೇರಿದಂತೆ ಇನ್ನಿತರ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಅಂಗಡಿ ಮಾಲಿಕರಿಗೆ ದಂಡ ವಿಧಿಸಿ, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಮ್.ಕೆ., ಅಧಿಕಾರಿಗಳಾದ ಮಹೇಂದ್ರ, ಸಿಬ್ಬಂದಿಗಳಾದ ಸುಧೀರ ಗೌಡ, ಗೋವಿಂದ ಗೌಡ, ಚೇಲುವರಾಜ ಸೇರಿದಂತೆ ಪೌರ ಕಾರ್ಮಿಕರಿದ್ದರು.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.