ಮಳವಳ್ಳಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುತ್ತಮ್ಮ ಅವರ ಮನೆಗೆ ಸಂಸದೆ ಸುಮಲತಾ ಅಂಬರೀಶ್ ಅವರು ಬುಧವಾರ ಭೇಟಿ ನೀಡಿ ಸ್ವಾಂತನ ಹೇಳಿದರು.
ಕಳೆದ ಶುಕ್ರವಾರ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದ ಗೇಟ್ ಬಳಿ ಆಟೋಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡದು ಆಟೋದಲ್ಲಿದ್ದ ಬಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುತ್ತಮ್ಮ, ಅವರ ಮಗ, ಮಗಳು ಮತ್ತು ಇಬ್ಬರು ಮೊಮ್ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದರು.
ಮುತ್ತಮ್ಮ ಅವರ ಪತಿ ಗುರುವಯ್ಯ, ಸೊಸೆ ರಮ್ಯಾ ಹಾಗೂ ಮೊಮ್ಮಕ್ಕಳಿಗೆ ಸ್ವಾಂತನ ಹೇಳಿ ಸಂಸದೆ ಸುಮಲತಾ ಅವರು ಮಾತನಾಡಿ, ಅತಿ ಹಿಂದುಳಿದ ಕೊರಮ ಸಮುದಾಯದ ಮಹಿಳೆ ಮುತ್ತಮ್ಮ ಗ್ರಾಮ ಪಂಚಾಯಿತಿಗೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ರಾಷ್ಟ್ರದ ಪ್ರಥಮ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ರಸ್ತೆ ಅಪಘಾತದಲ್ಲಿ ಅವರು ಸೇರಿದಂತೆ ಅವರ ಕುಟುಂಬದ ಐವರು ಸಾವನ್ನಪ್ಪಿರುವುದು ಮನಸ್ಸಿಗೆ ನೋವು ತರಿಸಿದೆ ಎಂದು ಭಾವುಕರಾದ ಅವರು ಇಂದೊAದು ವಿಶೇಷ ಪ್ರಕರಣ ಎಂದು ಪರಿಗಣಿಸಿ ರಾಜ್ಯ ಸರ್ಕಾರ ತಲಾ ಐದು ಲಕ್ಷ ರೂ.ಜೊತೆಗೆ ಕೇಂದ್ರ ಸರ್ಕಾರವು ಹೆಚ್ಚಿನ ಪರಿಹಾರ ನೀಡುವಂತೆ ಒತ್ತಾಯಿಸಲಾಗುವುದು ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಿವಣ್ಣ ಮಾತನಾಡಿ, ಕೂಲಿ ಮಾಡಿ ಜೀವನ ನಡೆಸುತ್ತಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಟುಂಬದಲ್ಲಿ ಮಗ, ಮಗಳು ಸೇರಿದಂತೆ ಐವರು ಸಾವನ್ನಪ್ಪಿದ್ದು, ಅವರ ಕುಟುಂಬಕ್ಕೆ ಮೃತಪಟ್ಟವರಿಗೆ ತಲಾ ಐದು ಲಕ್ಷ ರೂ.ಲಕ್ಷ ಪರಿಹಾರ, ಮಕ್ಕಳಿಗೆ ಕೇಂದ್ರೀಯ ವಿದ್ಯಾಲಯದಲ್ಲಿ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸಿ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಸಂಸದರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪರಿಹಾರಕ್ಕೆ ಒತ್ತಾಯಿಸಿದ್ದು, ಮುತ್ತಮ್ಮ ಅವರ ಕುಟುಂಬಕ್ಕೆ ಪರಿಹಾರ ನೀಡಲು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಹ ಮುಖ್ಯಮಂತ್ರಿಗೆ ಪತ್ರ ಬರೆಯಲಿದ್ದಾರೆ ಎಂದರು.
ಜಿಲ್ಲಾದ್ಯAತ ಪ್ರವಾಸ ಕೈಗೊಂಡು ನಷ್ಟಕ್ಕೊಳಗಾದ ಸಂದರ್ಭದಲ್ಲಿ ಸ್ಥಳದಲ್ಲಿಯೇ ಪರಿಹಾರ ಕೊಡಿಸಲು ಮುಂದಾಗಿದ್ದು, ಕೆಲವರು ಸಂಸತ್ ಅಧಿವೇಶನ ಮತ್ತು ಸಭೆಗಳಿಗೆ ಹೋದ ವೇಳೆಯಲ್ಲಿಯೇ ಸಮಯ ನೋಡಿಕೊಂಡು ಉದ್ದೇಶಪೂರ್ವಕವಾಗಿ ಆರೋಪ ಮಾಡುತ್ತಿದ್ದಾರೆ. ಅದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈಗಾಗಲೇ ಮಳೆಯಿಂದ ಹಾನಿಯಾದ ಪ್ರದೇಶಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಖ್ಯಮಂತ್ರಿಗಳು ಸಹ ಪರಿಹಾರ ಘೋಷಣೆ ಮಾಡಿದ್ದು, ಸರ್ಕಾರದ ಗಮನ ಸೆಳೆದು ನಷ್ಟಕೊಳಗಾದ ರೈತರಿಗೆ ಪರಿಹಾರ ಕೊಡಿಸಲು ಮುಂದಾಗುವುದಾಗಿ ಸಂಸದರು ಹೇಳಿದರು.
ಚಲನಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ದೊಡ್ಡಣ್ಣ, ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರಾದ ಚಿಕ್ಕಲಿಂಗಯ್ಯ, ಟಿ.ಎಂ.ಪ್ರಕಾಶ್, ಟಿ.ಪಿ.ಚಂದ್ರಶೇಖರ್, ಎಸ್ಸಿ ಎಸ್ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಮಹಾ ಸಭಾದ ಸತೀಸ್ ಕೂನನಪುರ, ಬಸವರಾಜು ಮಾಗನೂರು, ರಾಜ್ಯ ಹಿರಿಯ ಉಪಾಧ್ಯಕ್ಷ ಶಿವಾನಂದ ಭಜಂತ್ರಿ, ಸುಗುಣ, ನಾಗಮ್ಮ, ಆನಂದ್ ಕುಮಾರ್ ಇದ್ದರು.
ವರದಿ: ಮಲ್ಲಿಕಾರ್ಜು ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ