
ಭಟ್ಕಳ: ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಭಟ್ಕಳ ಗ್ರಾಮೀಣ ಪೊಲೀಸರು ದನಗಳ್ಳರಿಬ್ಬರನ್ನು ಬಂಧಿಸುವಲ್ಲಿ ಯಶಸ್ವೀಯಾಗಿದ್ದು, ಕಾರ್ಯಾಚರಣೆಯ ವೇಳೆ ಓರ್ವ ತಪ್ಪಿಸಿಕೊಂಡಿದ್ದ ಕುರಿತು ವರದಿಯಾಗಿದೆ.
ಭಟ್ಕಳ ತಾಲೂಕಿನ ಗುಳ್ಮಿಯಲ್ಲಿನ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದು ದನಗಳನ್ನು ಕಳ್ಳತನ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದಾರೆನ್ನುವ ಖಚಿತ ಮಾಹಿತಿಯನ್ನು ಪಡೆದ ಪೊಲೀಸರು ಕಾರ್ಕಳದ ಜಲೀಲ್ ಹುಸೇನ್ ಪಿ.ಕೆ. ಮೊಹಿದ್ದೀನ್, ಕಿನ್ನಿಗೋಳಿಯ ಮುಸ್ತಫಾ ಮೊಹಮ್ಮದ್ ಮೊಹಿದ್ದೀನ್ ಎನ್ನುವವರನ್ನು ಬಂಧಿಸುವಲ್ಲಿ ಯಶಸ್ವೀಯಾಗಿದ್ದಾರೆ. ಇನ್ನೋರ್ವ ಆರೋಪಿ ಕುಂದಾಪುರದ ಜಬ್ಬಾರ್ ಎನ್ನುವವನು ತಪ್ಪಿಕೊಂಡಿದ್ದು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಮಾಂಸವನ್ನು ತೆಗೆದುಕೊಳ್ಳುತ್ತಿದ್ದ ಭಟ್ಕಳದ ಇಬ್ರಾಹಿಂ ಎನ್ನುವವನ ಮೇಲೂ ಪ್ರಕರಣ ದಾಖಲಿಸಿಕೊಂಡಿದ್ದು ಆತನ ಪತ್ತೆಗೆ ಕೂಡಾ ಪೊಲೀಸರು ಬಲೆ ಬೀಸಿದ್ದಾರೆ. ಇವರು ತಮ್ಮ ಕೃತ್ಯಕ್ಕೆ ಬಳಸುತ್ತಿದ್ದ ಮಾರುತಿ ಓಮಿನಿ ಕಾರೊಂದನ್ನು ಕೂಡಾ ವಶಕ್ಕೆ ಪಡೆದುಕೊಂಡಿದ್ದು, ಎಲ್ಲೆಲ್ಲಿ ಕಳ್ಳತನ ಮಾಡಿದ್ದಾರೆ ಎನ್ನುವ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ