ಗುಂಡ್ಲುಪೇಟೆ: ಬೆಳಗಾವಿಯ ಚಳಿಗಾಲದ ಅಧಿವೇಶನ ಆರಂಭವಾದ ದಿನದಿಂದಲೂ ಎಂ ಇಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜವನ್ನು ಸುಟ್ಟು ಅಪಮಾನ ಮಾಡಿದ್ದು ಅಲ್ಲದೆ ದೇಶಭಕ್ತ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸುವುದು ದುರದೃಷ್ಟಕರ ಸಂಗತಿ ಆದಕಾರಣ ಕೂಡಲೇ ಆ ಎಂಇಎಸ್ ಪುಂಡರನ್ನ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಮಾಜಿ ಪುರಸಭಾ ಅಧ್ಯಕ್ಷರಾದ ಜಿ.ಡಿ.ಎಲ್. ಸುರೇಶ್ರವರ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರವಾಸಿ ಮಂದಿರದಿAದ ಹೊರಟು ತಾಲೂಕು ಕಚೇರಿಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು
ನಂತರ ಮಾತನಾಡಿದ ಜಿ .ಡಿ.ಎಲ್. ಸುರೇಶ್ ಎಂ .ಇ .ಎಸ್. ಪುಂಡರೂಗಳು ದಬ್ಬಾಳಿಕೆ ಮಾಡಿ ಕನ್ನಡ ಧ್ವಜವನ್ನು ಸುಟ್ಟುಹಾಕಿದ್ದಾರೆ ಅಲ್ಲದೆ ದೇಶಭಕ್ತ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಭಗ್ನಗೊಳಿಸಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಈ ಪುಂಡರಗಳನ್ನ ಬಂಧಿಸಬೇಕು . ಕೂಡಲೇ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾವಲುಪಡೆ ಸಂಘಟನೆ, ಅಖಿಲ ಭಾರತ ಕರುನಾಡ ಯುವಶಕ್ತಿ ಸಂಘಟನೆ, ವೈಭವ ಕರ್ನಾಟಕ ಸಂಘಟನೆ ,ಕರ್ನಾಟಕ ರಕ್ಷಣಾ ವೇದಿಕೆ, ಮತ್ತು ಎಸ್ ಡಿ ಪಿ ಐ ಸಂಘಟನೆ, ಮಾನವ ಬಂಧುತ್ವ ವೇದಿಕೆ ಇನ್ನೂ ಅನೇಕ ಸಂಘಟನೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಕಾರ್ಯಕರ್ತರು, ಹಾಜರಿದ್ದರು.
ವರದಿ: ಸದಾನಂದ ಕನ್ನೇಗಾಲ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.