ಬಾಗಲಕೋಟೆ:- , ಜಿಲ್ಲಾ ಕಾಂಗ್ರೆಸ್ ಸಮಿತಿ ಬಾಗಲಕೋಟೆ ಮತ್ತು ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಆಶ್ರಯದಲ್ಲಿ ೧೩೬ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಸದ್ಭಾವನಾ ನಡಿಗೆ ಸಂವಿಧಾನ ರಕ್ಷಿಸಿ ದೇಶ ಉಳಿಸಿ ಕಾರ್ಯಕ್ರಮ ನಡೆಯಿತು.
ಜಿಲ್ಲಾಡಳಿತ ಭವನದಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಯವರೆಗೆ ನಡಿಗೆ ಹಮ್ಮಿಕೊಳ್ಳ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಯುವ ಮುಖಂಡ ಭೀಮಸೇನ ಬಿ.ಚಿಮ್ಮನಕಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಜಿ ನಂಜಯ್ಯನಮಠ , ಮಾಜಿ ಸಚಿವರಾದ ಎಚ್ ವೈ ಮೇಟಿ, ಮಾಜಿ ಸಚಿವರಾದ ಆರ್. ಬಿ. ತಿಮ್ಮಾಪುರ, ಎಂ ಡಿ ಯಲಿಗಾರ , ರಾಜು ಜವಳಿ, ಶ್ರೀ ಶಿವಕುಮಾರ ಹಿರೇಮಠ, ಭೀಮಸಿ ಕಂಬಾರ ಹಾಗೂ ಜಿಲ್ಲಾ ಮುಖಂಡರು,ತಾಲೂಕಾ ಪದಾಧಿಕಾರಿಗಳು,ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ:- ರಾಜೇಶ್.ಎಸ್.ದೇಸಾಯಿ ಬಾದಾಮಿ
More Stories
ಏ.೨೨ ಕ್ಕೆ ಹಳಗೇರಿ- ಉಗಲವಾಟ ದಲ್ಲಿ ಬೃಹತ್ ಕಾರ್ಯಕ್ರಮ
2021-2022 ನೇ ಸಾಲಿನ ಏಳನೇ ವರ್ಗದ ವಿದ್ಯಾರ್ಥಿಗಳನ್ನು ಬೀಳ್ಕೊಡುಗೆ ಕಾರ್ಯಕ್ರಮ
ದಾಹ ತಣಿಸುವ ಆರವಟಿಗೆ ಆರಂಭಿಸಿ ಜನರ ಮೆಚ್ಚುಗೆಗೆ ಪಾತ್ರವಾದ ಯುವಾ ಬ್ರಿಗೇಡ್ ಘಟಕ