ಗುಂಡ್ಲುಪೇಟೆ ತಾಲೂಕಿನ ಹೊ೦ಗಳ್ಳಿ ಗ್ರಾಮದಲ್ಲಿ ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನ ಮತ್ತು ಅದೇ ಗ್ರಾಮದ ಸೋಮೇಶ್ವರ ದೇವಸ್ಥಾನಗಳಲ್ಲಿ ಹು೦ಡಿಯನ್ನು ಒಡೆದು ಹಣವನ್ನು ದೋಚಿ ಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಭಕ್ತಾದಿಗಳು ಹರಕೆ ನೀಡಿರುವ ಹಣವನ್ನು ಯಾರೋ ಕಳ್ಳರು ಕದ್ದುಕೊಂಡು ಹೋಗಿರುವ ವಿಷಯ ತಾಲೂಕಿನ ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ಸಂಘಟನೆಗೆ ತಿಳಿದ ಕೂಡಲೇ ಸಂಘಟನೆಯ ಅಧ್ಯಕ್ಷರಾದ ರ೦ಗಪ್ಪ ಮತ್ತು ಸಂಘಟನೆಯವರು ಇದಕ್ಕೆ ಸ್ಪಂದಿಸಿ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಸಹಕಾರದೊಂದಿಗೆ ದೇವಸ್ಥಾನಕ್ಕೆ ತೆರಳಿ ಪರಿಶೀಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು ಕಳ್ಳರನ್ನು ಹಿಡಿದು ಅವರಿಗೆ ಶಿಕ್ಷೆ ನೀಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆಯ ಅಧ್ಯಕ್ಷರಾದ ರಂಗಪ್ಪ ಮಾತನಾಡಿ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಪೊಲೀಸರಿಗೆ ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ಅಧ್ಯಕ್ಷರಾದ ರಂಗಪ್ಪ, ಉಪಾಧ್ಯಕ್ಷರಾದ ಗಿರೀಶ್, ತಾಲೂಕು ಕಾರ್ಯಾಧ್ಯಕ್ಷರಾದ ಚಿನ್ನು, ಕಾರ್ಮಿಕ ಘಟಕದ ಅಧ್ಯಕ್ಷರಾದ ಗಜ, ತಾಲೂಕು ಕಾರ್ಯದರ್ಶಿ ನವೀನ್, ಭೀಮನಬೀಡು ಗ್ರಾಮದ ಅಧ್ಯಕ್ಷರಾದ ಕೃಷ್ಣ, ಮಹೇಶ್ ರೈತ ಮುಖಂಡ, ಸಂಘಟನೆಯ ಸದಸ್ಯರಾದ ಸತೀಶ್ ರಾಜು, ಇನ್ನು ಮುಂತಾದವರು ಹಾಜರಿದ್ದರು.
ವರದಿ ; ಸದಾನ೦ದ ಕನ್ನೆಗಾಲ ಗುಂಡ್ಲುಪೇಟೆ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.