ಮಳವಳ್ಳಿ : ಕಳೆದ ಎರಡು ವರ್ಷಗಳಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಸ್ಸಿಎಸ್ಟಿ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದಿರುವುದು ನಿಜಕ್ಕೂ ನೋವಿನ ಸಂಗತಿ ಎಂದು ಶಾಸಕ ಡಾ. ಕೆ ಅನ್ನದಾನಿ ವಿಷಾಧಿಸಿದ್ದಾರೆ.
ಪಟ್ಟಣದ ಶಾಂತಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕಾಕರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇಷ್ಟು ವರ್ಷಗಳಿಂದ ನಿರಂತರವಾಗಿ ಈ ವರ್ಗದ ಮಕ್ಕಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರಂತರವಾಗಿ ವಿದ್ಯಾರ್ಥಿ ವೇತನವನ್ನು ನೀಡಿಕೊಂಡು ಬಂದಿದ್ದು ಆದರೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿ ವೇತನವನ್ನು ಯಾವ ಕಾರಣಕ್ಕೆ ಬಿಡುಗಡೆ ಮಾಡಿಲ್ಲ ಎಂಬುದು ತಿಳಿದಿಲ್ಲ ಆದರೂ ಸರ್ಕಾರಗಳ ಈ ಧೋರಣೆ ಸರಿಯಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಸಮಾಜಮುಖಿ ಕಾರ್ಯಗಳಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಘಸAಸ್ಥೆಗಳು ಸಹ ಕೈಜೋಡಿಸಿದರೆ ಜನಪರ ಕಾರ್ಯಗಳಲ್ಲಿ ಯಶಸ್ವಿ ಸಾಧಿಸಬಹುದು ಎಂದ ಶಾಸಕರು ಈ ನಿಟ್ಟಿನಲ್ಲಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕಾಕರಣ ಯಶಸ್ವಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸಹಕಾರ ಅತಿ ಮುಖ್ಯ ಎಂದು ಡಾ.ಕೆ. ಅನ್ನದಾನಿ ಅಭಿಪ್ರಾಯಪಟ್ಟರು.
ಎರಡನೇ ಕೋವಿಡ್ ಅಲೆ ಸಂದರ್ಭದಲ್ಲಿ ಹೆಚ್ಚಾಗಿ ಯುವಕರು ಸಾವನ್ನಪ್ಪಿದ್ದು ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಗುರಿಯಾಗುವುದರಿಂದ 15 ರಿಂದ 18 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳು ಲಸಿಕೆ ಪಡೆಯುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಹಾಗೂ ಶಾಂತಿ ಶಿಕ್ಷಕ ಸಂಸ್ಥೆಯ ಅಧ್ಯಕ್ಷೆ ನಾಗಮಣಿ ನಾಗೇಗೌಡ, ಪುರಸಭೆ ಅಧ್ಯಕ್ಷೆ ರಾಧಾ ನಾಗರಾಜು, ಉಪಾಧ್ಯಕ್ಷ ಟಿ.ನಂದಕುಮಾರ್, ಸ್ಥಾಯಿ ಸಮಿತಿಯ ಅಧ್ಯಕ್ಷ ಪುಟ್ಟಸ್ಬಾಮಿ, ತಹಶೀಲ್ದಾರ್ ಎಂ.ವಿಜಯಣ್ಣ, ತಾ.ಪಂ.ಇಒ ರಾಮಲಿಂಗಯ್ಯ, ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಪುರಸಭೆ ಮುಖ್ಯಾಧಿಕಾರಿ ಪವನ್ ಕುಮಾರ್, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಮಾಧವ್ ನಾಯಕ್, ಪ್ರಾಂಶುಪಾಲ ಶಿವಪ್ಪ,
ಪುರಸಭೆ ಸದಸ್ಯರಾದ ಎಂ.ಟಿ.ಪ್ರಶಾAತ್, ಸಿದ್ದರಾಜು, ಕುಮಾರ್, ನೂರುಲ್ಲಾ, ಪ್ರಮೀಳಾ, ಮತ್ತಿತರರು ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ