December 22, 2024

Bhavana Tv

Its Your Channel

ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲಿ ಪರಿಹರಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಶಾಸಕ ಸಿ .ಎಸ್. ನಿರಂಜನ್ ಕುಮಾರ್

ಗುಂಡ್ಲುಪೇಟೆ ತಾಲೂಕಿನ ಕನ್ನೇಗಾಲ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರಾದ ಸಿಎಸ್ ನಿರಂಜನ್ ಕುಮಾರ್ ರವರು ಗ್ರಾಮ ಪಂಚಾಯಿತಿ ಜನಗಳಿಗೆ ಸ್ಪಂದಿಸುವAತಾಗಬೇಕು ಮತ್ತು ಯಾವಾಗಲೂ ಸದಾ ಚಟುವಟಿಕೆಗಳಿಂದ ಇರಬೇಕು. ಅಲ್ಲದೆ ಈ ಸಮಯದಲ್ಲಿ ಸಾರ್ವಜನಿಕರು ತಮ್ಮ ತಮ್ಮ ಅಹವಾಲುಗಳನ್ನು ಸಭೆಯಲ್ಲಿ ಇಟ್ಟು ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಮುಖಾಂತರ ಸಮಸ್ಯೆಯನ್ನು ಬಗೆಹರಿಸಿದರು.
ಈ ಗ್ರಾಮ ಪಂಚಾಯತಿಯನ್ನೂ ಅಮೃತ ಗ್ರಾಮ ಯೋಜನೆಗೆ ಆಯ್ಕೆ ಮಾಡಲಾಗಿದೆ .ಹಾಗಾಗಿ ಈ ಯೋಜನೆಯಲ್ಲಿ ಏನೆಲ್ಲಾ ಅಭಿವೃದ್ಧಿಯನ್ನು ಮಾಡಬಹುದು ಎಂದರೆ ಡಿಜಿಟಲ್ ಗ್ರಂಥಾಲಯ, ಶಾಲಾ ಕಾಂಪೌAಡ್ ನಿರ್ಮಾಣ, ಘನತ್ಯಾಜ್ಯ ವಿಲೇವಾರಿ, ಬೀದಿ ದೀಪ ನಿರ್ವಹಣೆ ಮಾಡುವುದು, ಅಂಗನವಾಡಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು, ಕುಡಿಯುವ ನೀರಿನ ಸೌಲಭ್ಯ ಮತ್ತು ಶೌಚಾಲಯ ಈ ಎಲ್ಲಾ ರೀತಿಯ ಕೆಲಸ ಕಾರ್ಯಗಳನ್ನು ಇದರೊಳಗೆ ಮಾಡಬಹುದು . ಅಲ್ಲದೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿಸ್ವಾರ್ಥ ತನದಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಈ ಮೂಲಕ ಎಚ್ಚರಿಕೆ ನೀಡಿದರು.

ಯುವ ಮುಖಂಡ ಮಾದೇಶ್ ಕೆ. ಎಂ .ಮಾತನಾಡಿ ಅಧಿಕಾರಿಗಳು ತಾರತಮ್ಯ ಮಾಡದೆ ಸ್ವಾರ್ಥತನ ಬಿಟ್ಟು ಕೆಲಸ ಮಾಡಿದರೆ ಅಭಿವೃದ್ಧಿ ಸಾಧ್ಯ ಹಾಗಾಗಿ ಗ್ರಾಮದ ಪರವಾಗಿ ಕೇಳಿಕೊಳ್ಳುತ್ತೇನೆ. ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ,ಸದಸ್ಯರುಗಳು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ:-ಸದಾನಂದ ಕನ್ನೆಗಾಲ ಗುಂಡ್ಲುಪೇಟೆ

error: