
ಭಟ್ಕಳ: ಬದುಕಿನ ಬಗ್ಗೆ ಕನಸುಗಳನ್ನು ಕಟ್ಟಿಕೊಂಡಿದ್ದ ಕನಸು ಕಂಗಳ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ತನ್ನ ಕೋಣೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಭಟ್ಕಳ ಬೆಳಕೆ ಪಂಚಾಯತ ವ್ಯಾಪ್ತಿಯ ಕಾನಮದ್ಲ ಬೊಮ್ಮಕೇರಿ ಕೊಚ್ಚರೆಯಲ್ಲಿ ನಡೆದಿದೆ.
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕವನ ಮಂಜುನಾಥ ನಾಯ್ಕ, 17 ವರ್ಷ ಸಾವನ್ನಪ್ಪಿದ ಮೃತ ವಿದ್ಯಾರ್ಥಿನಿ.
ಈಕೆ ಪಕ್ಕದ ಉಡುಪಿ ಜಿಲ್ಲೆಯ ಬೈಂದೂರಿನ ಪಿ.ಯು ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಶುಕ್ರವಾರ ಮದ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ತನ್ನದೇ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಬಗ್ಗೆ ಜಟ್ಟಾ ಸುಬ್ಬಾ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗ್ರಾಮಿಣ ಠಾಣೆ ಪಿ.ಎಸ್.ಐ ಭರತ ನಾಯಕ ಹಾಗೂ ಎ.ಎಸ್ ಮಂಜುನಾಥ ಗೌವಡರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ