ಗುಂಡ್ಲುಪೇಟೆ :-ಹರಿಯಾಣದ ಪಾಣಿಪತ್‌ನಲ್ಲಿ ನಡೆದ ನ್ಯಾಷನಲ್ ಸ್ಫೋರ್ಟ್ಸ್ ಅಂಡ್ ಫಿಸಿಕಲ್ ಫಿಟ್ನೆಸ್ ಬೋರ್ಡ್ ಮತ್ತು ಏಷಿಯನ್ ಫಿಸಿಕಲ್ ಫಿಟ್ನೆಸ್ ಬೋರ್ಡ್ ಆಯೋಜಿಸಿದ್ದ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟ ದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಗುಂಡ್ಲುಪೇಟೆಯ ಜೆಎಸ್‌ಎಸ್ ಕಲಾ ಮತ್ತು ವಾಣಿಜ್ಯ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡದ ಆಟಗಾರರು ಫೈನಲ್ ಪಂದ್ಯದಲ್ಲಿ ತಮಿಳುನಾಡು ತಂಡದ ವಿರುದ್ಧ 15.13,14.15,15.12, ಅಂಕಗಳಿAದ ಅಂತಿಮ ಗೆಲುವು ಸಾಧಿಸುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಇದೇ ತಂಡವು 2 ತಿಂಗಳ ಹಿಂದೆ ಉತ್ತರಪ್ರದೇಶ ದ ಆಗ್ರಾದಲ್ಲಿ ನಡೆದಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿ ಮೊದಲ ಸ್ಥಾನವನ್ನು ಗಳಿಸಿ ಪಾಣಿಪತ್‌ನಲ್ಲಿ ಮೊನ್ನೆ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಅಲ್ಲಿಯೂ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.
ಈ ಸಂದರ್ಭದಲ್ಲಿ ತಂಡದ ಮ್ಯಾನೇಜರ್ ಚಂದ್ರು ಲಕ್ಕುರು, ಹಾಗೂ ತರಬೇತಿ ದಾರರಾದ ಮಲ್ಲು ಸ್ವಾಮಿ, ಭರತ್ ಯೂ ಕುಮಾರ್ ಹಾಜರಿದ್ದರು.
ವರದಿ ಸದಾನಂದ ಕನ್ನೆಗಾಲ ಗುಂಡ್ಲುಪೇಟೆ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.