December 22, 2024

Bhavana Tv

Its Your Channel

ಹಿರೇಗುತ್ತಿ ಹೈಸ್ಕೂಲಿನಲ್ಲಿ ೧೦ನೇ ವರ್ಗದ ವಿದ್ಯಾರ್ಥಿಗಳ ಪಾಲಕರ ಸಭೆ

ಕುಮಟಾ: “ಸುಖಾರ್ಥಿಯಾದವನು ವಿದ್ಯೆಯನ್ನು ಬಿಡಬೇಕು, ವಿದ್ಯಾರ್ಥಿಯಾದವನು ಸುಖವನ್ನು ಬಿಡಬೆಕು, ಸುಖಾರ್ಥಿಯಾದವನಿಗೆ ವಿದ್ಯೆ ಎಲ್ಲಿಂದ? ಮತ್ತು ವಿದ್ಯಾರ್ಥಿಯಾದವನಿಗೆ ಸುಖ ಎಲ್ಲಿಂದ? ಸಮಯ ಮತ್ತು ಗುರಿ ಇವೆರಡೂ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖವಾದದ್ದು” ಎಂದು ಹಿರೇಗುತ್ತಿ ಹೈಸ್ಕೂಲ್ ಆಡಳಿತ ಮಂಡಳಿ ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕ ನುಡಿದರು.
ಅವರು ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನಲ್ಲಿ ನಡೆದ ೧೦ ನೇ ತರಗತಿಯ ಪಾಲಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ “ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗಬೇಕು ಜೊತೆಗೆ ನಾವು ನೀವು ಶಿಕ್ಷಣ ಕ್ಷಣ ಕ್ಷಣ ಸಾಗುತ್ತಿರಬೇಕು” ಎಂದರು.
ಹೈಸ್ಕೂಲ್ ಆಡಳಿತ ಮಂಡಳಿ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಸೆಕ್ರೆಟರಿ ಮೋಹನ ಬಿ ಕೆರೆಮೆನೆ ಮಾತನಾಡಿ “ವಿದ್ಯಾರ್ಥಿಗಳು ಒಂದು ಗುರಿಯನ್ನು ಇಟ್ಟುಕೊಂಡು ಆ ಗುರಿಯ ಸಫಲತೆಯಲ್ಲಿ ವಿದ್ಯಾರ್ಥಿಗಳ ಅವಿರತ ಪ್ರಯತ್ನ ಮುಖ್ಯ” ಎಂದರು.
ರಾಜೀವ ಗಾಂವಕರ ಆಶ್ರಯ ಪೌಂಡೇಶನ ಹಿರೇಗುತ್ತಿ ಮಾತನಾಡಿ “ಹಿರೇಗುತ್ತಿ ಹೈಸ್ಕೂಲ್ ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂಬುದು ನನಗೆ ಹಾಗೂ ನಮ್ಮ ಊರಿಗೆ ಹೆಮ್ಮೆಯ ವಿಷಯ ಬದುಕನ್ನು ಕಟ್ಟಿಕೊಡುವ ಜೀವನ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದರು”.
ಹೈಸ್ಕೂಲ್ ಮುಖ್ಯಾಧ್ಯಾಪಕ ರೋಹಿದಾಸ ಎಸ್ ಗಾಂವಕರÀ ಮಾತನಾಡಿ “ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ ಜೊತೆಗೆ ಪಾಲಕರ ಜವಬ್ದಾರಿಯೂ ಅತೀ ಮುಖ್ಯ. ಪ್ರಯತ್ನ ಮತ್ತು ಶೃದ್ಧೆಯಿಂದ ಎಂತಹ ವಿದ್ಯೆಯನ್ನಾದರೂ ಕರಗತ ಮಾಡಿಕೊಳ್ಳಬಹುದು”
ಜಿಲ್ಲಾ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಪ್ರಥಮಸ್ಥಾನ ಪಡೆದ ಹಾಗೂ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ನಚಿತ ಸಿ ಅಂಬಿಗ ವಿದ್ಯಾರ್ಥಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪಾಲಕರೆಲ್ಲರೂ ಭಾಗವಹಿಸಿದ್ದರು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ಪಾಲಕರ ಜೊತೆ ಚರ್ಚಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ವಿಶ್ವನಾಥ ಬೇವಿನಕಟ್ಟಿ, ಬಾಲಚಂದ್ರ ಹೆಗಡೇಕರ, ನಾಗರಾಜ ನಾಯಕ, ಜಾನಕಿ ಗೊಂಡ, ಇಂದಿರಾ ನಾಯಕ, ಶಿಲ್ಪಾ ನಾಯಕ, ಸೌಜನ್ಯ ಬಂಟ್, ಕವಿತಾ ಅಂಬಿಗ, ದೇವಾಂಗಿನಿ ನಾಯಕ, ಗೋಪಾಕೃಷ್ಣ ಗುನಗಾ ಉಪಸ್ಥಿತರಿದ್ದರು. ಎನ್ ರಾಮು ಹಿರೇಗುತ್ತಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಮಹಾದೇವ ಗೌಡ ವಂದಿಸಿದರು.

                            ವರದಿ: ಎನ್.ರಾಮು.ಹಿರೇಗುತ್ತಿ
error: