
ಭಟ್ಕಳ :-ಬೀನಾ ವೈದ್ಯ ಕಾಲೇಜಿನಲ್ಲಿ ರಾಷ್ಟಿçÃಯ ಯುವಜನೋತ್ಸವ ಆಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (ಕಾರವಾರ), ಭಟ್ಕಳ ವಕೀಲರ ಸಂಘ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟಿçÃಯ ಯುವ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಭಟ್ಕಳ ತಾಲೂಕಿನ ನ್ಯಾಯಮೂರ್ತಿ ಶ್ರೀ ಪಹಾದ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬೀನಾ ವೈದ್ಯ ಆಡಳಿತ ನಿರ್ದೇಶಕಿ ಶ್ರೀಮತಿ ಪುಷ್ಪಲತಾ ವೈದ್ಯ, ಪೋಲಿಸ್ ಇಲಾಖೆಯ ಮುಖ್ಯಸ್ಥರು, ಪ್ರಾಂಶುಪಾಲರು ಹಾಗೂ ಇಂಗ್ಲೀಷ್ ಉಪನ್ಯಾಸಕರಾದ ಶ್ರೀ ನಯೀಮ್ ಗೋರಿ ಅವರು ಉಪಸ್ಥಿತರಿದ್ದರು. ನ್ಯಾಯಮೂರ್ತಿ ಶ್ರೀ ಪಹಾದ್ ಅವರು ಕಾಲೇಜು ವಿದ್ಯಾರ್ಥಿಗಳನ್ನು ಉದ್ದೇಶಿಸಿ ದೇಶದಲ್ಲಿ ಶಾಂತಿ, ಭದ್ರತೆ ಮತ್ತು ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯನ್ನು ಮೂಡಿಸುವುದರ ಕುರಿತು ಉಪನ್ಯಾಸ ನೀಡಿದರು. ಯುವ ಜನರ ಶಕ್ತಿ ಸಾಮರ್ಥ್ಯದ ಅರಿವನ್ನು ಮೂಡಿಸಿ ಮಕ್ಕಳಲ್ಲಿ ಹೊಸ ಚೈತನ್ನವನ್ನು ತುಂಬಿದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ