May 4, 2024

Bhavana Tv

Its Your Channel

ಶಿರಾಡಿ ಹೆದ್ದಾರಿ ಉನ್ನತೀಕರಣ;ಕೇಂದ್ರಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

ರೋಣ: ರಾಜ್ಯದ ಮಹಾತ್ವಾಕಾಂಕ್ಷಿ ಯೋಜನೆ ಮತ್ತು ಬಹುದಿನಗಳ ಬೇಡಿಕೆಯಾಗಿದ್ದ ಶಿರಾಡಿ ಘಾಟ್ ಹೆದ್ದಾರಿಯ ದುರಸ್ತಿ ಮತ್ತು ಚತುಷ್ಪಥ ನಿರ್ಮಾಣ ಯೋಜನೆಗೆ ಸುಮಾರು 1,200 ಕೋಟಿ ರೂ ಕಾಮಗಾರಿಗಳಿಗೆ ಕೇಂದ್ರ ಸರ್ಕಾರವು ಹಸಿರು ನಿಶಾನೆ ನೀಡಿದ್ದಕ್ಕೆ ಸನ್ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಜಿ ಮತ್ತು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ತಿಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಿ .ಸಿ. ಪಾಟೀಲ

ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನವದೆಹಲಿಗೆ ತೆರಳಿ ಶಿರಾಡಿಘಾಟ್ ಚತುಷ್ಪತ ಯೋಜನೆ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ಮಾಡಿಕೊಂಡ ಮನವಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ , ತುರ್ತಾಗಿ ಆದ್ಯತೆಯ ಮೇರೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಗಡ್ಕರಿ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿರುವುದು ಅವರ ಜನಪರ ಕಾಳಜಿಗೆ ನಿದರ್ಶನವಾಗಿದೆ .

ವಾಣಿಜ್ಯ ನಗರಿಯಾದ ಮಂಗಳೂರು ಮತ್ತು ಬೆಂಗಳೂರು ನಡುವೆ ಪ್ರಮುಖ ಸಂಪರ್ಕದ ಕೊಂಡಿಯಾಗಿದ್ದ ಶಿರಾಡಿ ಘಾಟ್ ರಸ್ತೆ ಪ್ರತಿವರ್ಷ ಮಳೆಗಾಲದಲ್ಲಿ ಭೂಕುಸಿತ ಮತ್ತಿತರ ಕಾರಣಗಳಿಂದ ಹಾನಿಗೊಂಡು ಸಂಚಾರ ಸಂಪರ್ಕ ಸಾಗಾಟಕ್ಕೆ ತೀರಾ ತೊಂದರೆಯಾಗುತ್ತಿತ್ತು. ಈಗ ಶಿರಾಡಿ ಚತುಷ್ಪತ ರಸ್ತೆ ವಿಸ್ತರಣೆಗೆ ಹಸಿರು ನಿಶಾನೆ ದೊರೆತಿರುವುದರಿಂದ ಬಹುಕಾಲದ ಈ ಸಮಸ್ಯೆಗೆ ಮುಕ್ತಿ ಸಿಗುವಂತಾಗಿದೆ .
ಈ ಯೋಜನೆ ಕೈಗೂಡುವಂತಾಗುವಲ್ಲಿ ಅಪಾರ ಶ್ರಮ ವಹಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರಿಗೂ ಕೃತಜ್ಞತೆ ಅರ್ಪಿಸುತ್ತೇನೆ ಎಂದು ಸಿ ಸಿ ಪಾಟೀಲ ತಿಳಿಸಿದರು

ಕೇಂದ್ರದಿAದ ಅನುಮೋದನೆಗೊಂಡ ಈ ಯೋಜನೆಯನ್ನು ಉತ್ತಮ ಗುಣಮಟ್ಟದೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ಉದ್ದೇಶ ನಮ್ಮದಾಗಿದೆ. ಯೋಜನೆಯಿಂದ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ವರದಾನವಾಗಲಿದೆ ಭಾವಿಸುತ್ತೇನೆ ಎಂದು ಸಿ ಸಿ ಪಾಟೀಲ ತಿಳಿಸಿದರು

ವರದಿ: ವೀರಣ್ಣ ಸಂಗಳದ

error: