December 22, 2024

Bhavana Tv

Its Your Channel

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ, ವ್ಯಕ್ತಿ ಸಾವು

ಮಳವಳ್ಳಿ : ಮಳವಳ್ಳಿ ತಾಲ್ಲೂಕು ಗುಳಘಟ್ಟ ಗೇಟ್ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ
ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಜರುಗಿದೆ.
ಗುಳಗಟ್ಟ ಗ್ರಾಮ ಕುಳ್ಳಯ್ಯ ಎಂಬುವರೇ ಮೃತಪಟ್ಟ ದುರ್ದೈಯಾಗಿದ್ದು 63 ವರ್ಷ ವಯಸ್ಸಿನ ಇವರು ಗುಳಗಟ್ಟ ಗೇಟ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಕೆ.ಎಂ ದೊಡ್ಡಿ ಕಡೆಯಿಂದ ಬಂದ ಬೈಕ್ ವೊಂದು ಡಿಕ್ಕಿಹೊಡೆದಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದ ಹಿನ್ನಲೆಯಲ್ಲಿ ಕುಳ್ಳಯ್ಯ ನನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಬೆಂಗಳೂರಿನ ನಿಮಾನ್ಸ್ ಗೆ ಸೇರಿಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಈ ಸಂಬAದ ಬೈಕ್ ಯನ್ನು ಪೊಲೀಸರು ವಶಕ್ಕೆ ಪಡೆದಿದ್ದು
ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಈ ಸಂಬAಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ.

error: