March 12, 2025

Bhavana Tv

Its Your Channel

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್

ಭಟ್ಕಳ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಭಟ್ಕಳ ತಾಲೂಕಿನ ಮಾವಳ್ಳಿ-2 ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡ್ಸಳು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಗ್ರಾಮಗಳ ಜನರಿಗೆ ಸರಕಾರದ ಸೌಲಭ್ಯಗಳನ್ನು ಅಲ್ಲಿನ ಕುಂದು ಕೊರತೆಗಳನ್ನು ಗ್ರಾಮಕ್ಕೆ ಅಧಿಕಾರಿಗಳು ಬಂದಲ್ಲಿ ಪರಿಹರಿಸಬಹುದು ಎನ್ನುವ ಉದ್ದೇಶದಿಂದ ಸರಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕೆಲವೊoದು ತಾಂತ್ರಿಕ ದೋಷದಿಂದ ಗ್ರಾಮಸ್ಥರ ಕಾರ್ಯ ಆಗಿರುವುದಿಲ್ಲ. ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ, ರಸ್ತೆ, ಸ್ವಚ್ಛತೆ, ಸೇತುವೆ, ಕುಡಿಯುವ ನೀರು, ಸ್ಮಶಾನ ಇತ್ಯಾದಿಗಳ ಕುರಿತು ಕೂಡಾ ಸ್ಥಳದಲ್ಲಿಯೇ ಕ್ರಮ ಕೈಗೊಳ್ಳಲು ಸಂಬAಧಪಟ್ಟ ತಾಲೂಕು ಮಟ್ಟದ ಇದಕ್ಕೆ ಅಧಿಕಾರಿಗಳು ಹಾಜರಿರುತ್ತಾರೆ. ಸರಕಾರದ ಯೋಜನೆಗಳ ಮಾಹಿತಿ ಜನಸಾಮಾನ್ಯರಿಗೆ ತಿಳಿಸಲು ಸಂಬAಧಪಟ್ಟ ಎಲ್ಲಾ ಇಲಾಖೆಯ ಉಪಸ್ಥಿತರಿದ್ದರು.
ತಾಲೂಕುಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದಾರೆ. ವಿಶೇಷವಾಗಿ ಸರ್ವೇ ಇಲಾಖೆ, ಪಡಿತರ ಚೀಟಿ, ಮಾಸಾಶನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಇತ್ಯಾದಿಗಳನ್ನು ಸ್ಥಳದಲ್ಲಿಯೇ ಮಂಜೂರು ಮಾಡಲಾಗುವುದು ಎಂದರು.
ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದ ತಹಸೀಲ್ದಾರ್ ರವಿಚಂದ್ರ ಎಸ್. ಅವರು ಇದೊಂದು ಸರಕಾರದ ಉತ್ತಮ ಕಾರ್ಯಕ್ರಮವಾಗಿದ್ದು, ಗ್ರಾಮೀಣ ಭಾಗದವರು ಇದರ ಪ್ರಯೋಜನ ಪಡೆಯಬೇಕೆಂದರು,
ತಾಪಂ ಇಒ ಪ್ರಭಾಕರ ಚಿಕ್ಕನಮನೆ, ಬಿಇಒ ದೇವಿದಾಸ ಮೊಗೇರ, ಮಾವಳ್ಳಿ-2 ಗ್ರಾಪಂ ಅಧ್ಯಕ್ಷ ಮಹೇಶ ನಾಯ್ಕ ಮುಂತಾದವರು ಇದ್ದರು. ಶಿಕ್ಷಕ ಪರಮೇಶ್ವರ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.ನಂತರ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು.
ಕೊಡ್ಸಳು ಶಾಲೆಯಲ್ಲಿ 125ಕ್ಕೂ ಹೆಚ್ಚು ಮಕ್ಕಳಿದ್ದು ಶಾಲೆಗೊಂದು ಹೈಟೆಕ್ ಶೌಚಾಲಯ ಕೊಡಿ ಎನ್ನುವ ಬೇಡಿಗೆ ತಾತ್ಕಾಲಿಕ ಒಪ್ಪಿಗೆ ನೀಡಿದ್ದು ಶಿಫಾರಸು ಮಾಡುವ ಭರವಸೆ ಬಿಇಒ ನೀಡಿದರು.ಮಾವಳ್ಳಿ ಕಂದಾಯ ನಿರೀಕ್ಷಕ ಶ್ರೀನಿವಾಸ ಮಾಸ್ತಿ, ಗ್ರಾಮ ಲೆಕ್ಕಾಧಿಕಾಗಳು ಮುಂತಾದವರು ಇದ್ದರು

error: