
ಭಟ್ಕಳ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ತಾಲೂಕಾ ಆಸ್ಪತ್ರೆಯ ಶ್ರೀ ನಾಗಯಕ್ಷೆ ಹಾಲ್ನಲ್ಲಿ ಶಾಸಕ ಸುನೀಲ್ ನಾಯ್ಕಅವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಪಲ್ಸ್ ಪೋಲಿಯೋ ಒಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು ಪ್ರತಿಯೊಂದು ಮಗುವಿಗೂ ಪಲ್ಸ್ ಹನಿ ಹಾಕುವುದು ಅಗತ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ನಮ್ಮ ದೇಶವನ್ನು 2014ರಲ್ಲಿಯ ಡಬ್ಲು.ಎಚ್.ಓ. ಪೋಲಿಯೋ ಮುಕ್ತ ಎಂದು ಘೋಷಿಸಿದ್ದಾರೆ. ಇಂದು ದೇಶದಾದ್ಯಂತ ಪಲ್ಸ್ ಪೊಲಿಯೋ ಕಾರ್ಯಕ್ರಮ ನಡೆಯುಅತ್ತಿದ್ದು ಐದು ವರ್ಷದೊಳಗಿನ ಮಕ್ಕಳಿಗೆ ಅವರು ವಾಸಿಸುವಲ್ಲಿಯೇ ಹತ್ತಿರದಲ್ಲಿ ಇರುವ ಪಲ್ಸ್ ಪೋಲಿಯೋ ಬೂತ್ನಲ್ಲಿ ಹೋಗಿ ಪೋಲಿಯೋ ಹನಿ ಹಾಕಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ತಪ್ಪದೇ ಪಲ್ಸ್ ಪೊಲಿಯೋ ಹನಿಯನ್ನು ಹಾಕಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಪ್ರಭಾರ ತಹಸೀಲ್ದಾರ್ ಅಶೋಕ ಭಟ್ಟ ಅವರು ಮಾತನಾಡಿ ಭಟ್ಕಳದ ತಹಸೀಲ್ದಾರ್ ಆಗಿ ಪ್ರಭಾರ ವಹಿಸಿಕೊಂಡ ನಂತರ ಪ್ರಥಮವಾಗಿ ಒಂದು ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಅತ್ಯಂತ ಸಂತಸವಾಗುತ್ತಿದೆ. ನಾವು ಹಿಂದೆ ಅನೇಕ ಮಕ್ಕಳು ಪೋಲಿಯೋ ಪೀಡಿತರಾಗಿ ಶಾಲೆಗೆ ಬರುವುದನ್ನು ನೋಡಿದ್ದೆವು. ಅಂದು ಕೇವಲ ಆ ಮಕ್ಕಳು ಮಾತ್ರವಲ್ಲ, ಅವರೊಂದಿಗೆ ಓದುತ್ತಿದ್ದ ನಮಗೂ ಕೂಡಾ ಅವರ ಕಷ್ಟ ನೋಡಿ ಸಂಕಟವಾಗುತ್ತಿತ್ತು. ಆದರೆ ಇಂದು ಪೋಲಿಯೋ ಮುಕ್ತ ಭಾರತದತ್ತ ಹೆಜ್ಜೆ ಹಾಕುತ್ತಿರುವುದು ಸಂತಸದ ಸಂಗತಿಯಾಗಿದೆ. ಈ ಕಾರ್ಯಕ್ರಮದಲ್ಲಿ ಸರಕಾರದೊಂದಿಗೆ ಸಾರ್ವಜನಿಕ ಸಂಘ ಸಂಸ್ಥೆಗಳ ಸಹಭಾಗಿತ್ವ ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ರೋಟರಿ ಕ್ಲಬ್ ಅಧ್ಯಕ್ಷ ರಾಘವೇಂದ್ರ ನಾಯ್ಕ ಉಪಸ್ಥಿತರಿದ್ದರು. ತಾಲೂಕಾ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಅವರು ಸ್ವಾಗತಿಸಿದರು. ನಂತರ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಯನ್ನು ಹಾಕುವುದರ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ