ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮಕ್ಕೆ ಹೊಂದಿಕೊAಡಿರುವ ಶ್ರೀರಾಮದೇವರ ಪಕ್ಕದಲ್ಲಿರುವ ಗುಮ್ಮ ಕಲ್ಲು ಗುಡ್ಡ ಕುಸಿದು ಸುಮಾರು ಹತ್ತು ಮಂದಿ ಕೂಲಿ ಕಾರ್ಮಿಕರು ಬಂಡೆ ಕೆಳಗೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದ್ದು ಆರು ಮಂದಿಗೆ ತೀವ್ರವಾಗಿ ಪೆಟ್ಟು ಬಿದ್ದು ಗಾಯಾಳುಗಳನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಿರುವ ಘಟನೆ ನಡೆದಿದೆ.
ಇಂದು ಮುಂಜಾನೆ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರ್ಮಿಕರ ಮೇಲೆ ಗುಡ್ಡ ಕುಸಿದುಬಿದ್ದ ಹಿನ್ನೆಲೆಯಲ್ಲಿ ಸರಿ ಸುಮಾರು 300 ಅಡಿ ಆಳದ ಕಲ್ಲುಕೋರೆಯಲ್ಲಿ ಹತ್ತು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ ಇದರೊಂದಿಗೆ 4 ಟ್ರ್ಯಾಕ್ಟರ್ 4,ಇಟಾಚಿ ,4 ಟಿಪ್ಪರ್,ಕಲ್ಲು ಕೊರೆಯುವ ಯಂತ್ರ ಕ್ವಾರೆ ಅಡಿಯಲ್ಲಿ ಸಿಲುಕಿ ಸಂಪೂರ್ಣ ಜಖ0ವಾಗಿದೆ. ಇದೇ ಸಂದರ್ಭದಲ್ಲಿ ಇಟಾಚಿ ಯಲ್ಲಿ ಸಿಲುಕಿದ ಒಬ್ಬ ಕೂಲಿಕಾರರನ್ನು ಪೊಲೀಸರು ಮತ್ತು ಅಗ್ನಿ ಶಾಮಕ ದಳದವರು ಜಂಟಿ ಕಾರ್ಯಾಚರಣೆ ನಡೆಸಿ ಒಬ್ಬನನ್ನು ರಕ್ಷಣೆಮಾಡಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ವರಿಷ್ಠಾಧಿಕಾರಿಗಳು ಗಣಿ ಮತ್ತು ಭೂ ಇಲಾಖೆ ಅಧಿಕಾರಿ ವರ್ಗದವರು, ತಹಶೀಲ್ದಾರ್ ಆರೋಗ್ಯ ಇಲಾಖೆಯವರು ಪೊಲೀಸ್ ಇಲಾಖೆ ಇನ್ನೂ ಅನೇಕ ಇಲಾಖೆಯವರು ಹಾಜರಿದ್ದರು.
ವರದಿ: ಸದಾನಂದ ಕನ್ನೆಗಾಲ ಗುಂಡ್ಲುಪೇಟೆ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.