
ಭಟ್ಕಳ: ನಗರದ ಅಂಜುಮಾನ್ ಮಹಿಳಾ ಪದವಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಥಮ ದರ್ಜೆ ಸಿವಿಲ್ ನ್ಯಾಯಾಧೀಶ ಫವಾಜ್ ಪಿ.ಎ. ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕಾನೂನು ಸೇವಾ ಸಮಿತಿಯ ಅಡಿಯಲ್ಲಿ ದೊರೆಯುವ ಸೌಲಭ್ಯಗಳನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಉಪಸ್ಥಿತರಿದ್ದ ನಗರ ಠಾಣೆಯ ಸಬ್ ಇನ್ಸಪೆಕ್ಟ್ ಸುಮಾ ಬಿ. ಅವರು ಮಾತನಾಡಿ ಹೆಣ್ಣು ಮಕ್ಕಳ ಹಕ್ಕು, ಕಾನೂನಿನ ನೆರವು, ಹೆಣ್ಣು ಮಕ್ಖಳ ರಕ್ಷಣೆಗಾಗಿಯೇ ಇರುವ ಕಾನೂನು ಮಾಹಿತಿಯನ್ನು ನೀಡಿದರು. ಹೆಣ್ಣು ಮಕ್ಕಳ ರಕ್ಷಣೆಗಾಗಿ ಇರುವ ಕಾನೂನುಗಳಲ್ಲಿನ ಸೆಕ್ಷನ್ ಅವುಗಳನ್ನು ಯಾವ್ಯಾವ ಸಂದರ್ಭದಲ್ಲಿ ಉಪಯೋಗಿಸಬಹುದು ಎನ್ನುವ ಕುರಿತು ವಿವರಿಸಿದ ಅವರು ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಗುರಿ, ಮುಂದಿನ ಭವಿಷ್ಯದ ಕುರಿತು ಚಿಂತನೆ ಇತ್ಯಾದಿಗಳನ್ನು ಸ್ವ ಅನುಭವಗಳೊಂದಿಗೆ ಹಂಚಿಕೊAಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಜುಮಾನ್ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲೆ ರಯೀಸಾ ವಹಿಸಿದ್ದರು.
More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ